ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಚಿತ್ರದುರ್ಗ: ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 10 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 12 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 15 ರಂದು ಸಂಜೆ 5.30 ಗಂಟೆಯೊಳಗೆ ಹೊಸದುರ್ಗ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೊಸದುರ್ಗದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.