E-PAPER
17 Nov 2026, 12:22:23 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

ಬೆಳಗಾವಿ-09: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.

ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ.
ಬೀದಿ ಬೀದಿಗಳಲ್ಲಿ ಹೋಗಿ. ಪ್ರಚಾರ ಮಾಡಿ. ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ. ಮಕ್ಕಳನ್ನು ಹೆಚ್ಚು ಆಕರ್ಷಿಸಿ ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

ಅಂಗನವಾಡಿ ಕಟ್ಟಡಗಳ ಬಾಡಿಗೆ, ಮಕ್ಕಳಿಗೆ ಹಂಚುವ ಮೊಟ್ಟೆಗಳಿಗೆ ಅನುದಾನ ಕೊರತೆ ಇಲ್ಲ. ಇವುಗಳನ್ನು ವಿಳಂಬವಿಲ್ಲದೆ ಪಾವತಿಸಿ. ಪ್ರತಿ ತಿಂಗಳು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಿ. ಇಲಾಖೆಯ ಕೆಲಸಗಳು ಸುಗಮವಾಗಿ ನಡೆಯಬೇಕು. ಅಗತ್ಯ ಸುಧಾರಣೆಯಾಗಬೇಕು. ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಸಚಿವರು ಹೇಳಿದರು.

ಸಕ್ಷಮ ಯೋಜನೆಯಲ್ಲಿ ವಿಶೇಷ ಪ್ರಯತ್ನ ಮಾಡಿ ರಾಜ್ಯಕ್ಕೆ 17,500 ಅಂಗನವಾಡಿ ತರಲಾಗಿದೆ. ದೊಡ್ಡ ರಾಜ್ಯಗಳಿಗೂ ಸಿಗದಷ್ಟು ನಮಗೆ ಸಿಕ್ಕಿದೆ. ಕೇಂದ್ರ ಸರಕಾರ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಬೇರೆ ರಾಜ್ಯಗಳಿಗೆ ಮಾದರಿಯಾಗಿ ಉದಾಹರಿಸುತ್ತಿದೆ. ಹಾಗಾಗಿ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ಜಿಲ್ಲಾಧಿಕಾರಿ ಮೊಹಮದ್‌ ರೋಷನ್‌, ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಶಿಂಧೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ್‌ ಗುಡೇದ್‌, ಆಯುಕ್ತ ಗುಲಾಬರಾವ್ ಭೂಷಣ ಬೋರಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹೇಶ್‌ ಬಾಬು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್‌, ಡಿಎಸ್‌ಪಿ ನಿರಂಜನ್‌ ರಾಜೇ ಅರಸ್‌, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.