LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

 

 ದಾವಣಗೆರೆ: ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು 'ದೀನ್ ದಯಾಳ ಸ್ಪರ್ಶ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಾಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವ್ಯದು ಇದರ ಉದ್ದೇಶವಾಗಿದೆ. 2023-24 ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ಸದಸ್ಯರಾಗಿರಬೇಕು.

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ  www.indiapost.gov.in     ಅಥವಾ  www.karnatakapost.gov.in     8861126883 2019146755, 08192-236277 ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಅಂಚೆ ಇಲಾಖೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST