LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಜಲಿ ಹತ್ಯೆ ಕೇಸ್: 'ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ'- ಸಂತೋಷ್ ಲಾಡ್

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಸಂತೋಷ ಲಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿನ ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು ಅಂತ ಮನವಿ ಮಾಡುತ್ತೇನೆ. ನೇಹಾ ಹತ್ಯೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಸಮಾಜದಲ್ಲಿ ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಂತೂ ಒಳ್ಳೆಯದಲ್ಲ. ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕುವುದು ಪೋಲಿಸರ ಕರ್ತವ್ಯ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂಥ ಯುವಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಅಂಜಲಿ ಹತ್ಯೆ ಆರೋಪಿಯ ವಿರುದ್ಧ ಆಕೆಯ ಪೋಷಕರು ಮೊದಲೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಈಗಾಗಲೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೆ ಅಂಜಲಿ ಹತ್ಯೆ ತನಿಖೆ ನಡೆಯುತ್ತದೆ. ಗೃಹ ಸಚಿವರು ಬಂದು ಈ ಕುರಿತು ಮಾತಾನಾಡುತ್ತಾರೆ. ಇನ್ಮುಂದೆ ಇಂತಹ ಅಹಿತಕರ ಘಟನೆ ನಡೆದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!ಬೈ ಎಲೆಕ್ಷನ್, ಸಿಪಿ ಯೋಗೇಶ್ವರ ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ.! ಡಿ.ಕೆ.ಶಿಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆಅರಣ್ಯ ಭೂಮಿ ಒತ್ತುವರಿ: ಸಚಿವ ಎನ್ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು.!ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ: ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ.!MLC ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆಗಡಿಯಲ್ಲಿ ಗಸ್ತು ತಿರುಗಲು ಭಾರತ, ಚೀನಾ ಗ್ರೀನ್ ಸಿಗ್ನಲ್ಪೊಲೀಸರ ತ್ಯಾಗ ಹಾಗೂ ಬಲಿದಾನ ಸ್ಮರಣೀಯ-ಜಿಲ್ಲಾಧಿಕಾರಿ ಟಿ.ವೆಂಕಟೇಶ್ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ 48 ಮನೆಗಳು ಭಾಗಶಃ ಹಾನಿ 14.3 ಮಿ.ಮೀ ಮಳೆ