Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಂಕೋಲಾ ಬಳಿ ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ: 2 ವರ್ಷದ ಕಂದಮ್ಮ ದುರ್ಮರಣ

ಉತ್ತರ ಕನ್ನಡ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರ್ಕಾರಿ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎರಡು ವರ್ಷದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಬೆಳಸೆ ಸಮೀಪ ಗುರುವಾರ ನಡೆದಿದೆ.

ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಅಂಕೋಲಾ ಘಟಕಕ್ಕೆ ಸೇರಿದ ಸಾರಿಗೆ ಸಂಸ್ಥೆಯ ಬಸ್, ಬೆಳಸೆ ಹಂದಿಗದ್ದೆ ಕ್ರಾಸ್ ಬಳಿ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಪ್ರಯಾಣಿಕರ ಚೀರಾಟ ಮುಗಿಲು ಮುಟ್ಟಿತ್ತು. ಘಟನೆಯಲ್ಲಿ ಗಂಭೀರ ಪೆಟ್ಟು ಬಿದ್ದ ಪರಿಣಾಮ ಎರಡು ವರ್ಷದ ಕಂದಮ್ಮ ಮೃತಪಟ್ಟಿದ್ದು, ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ರಕ್ಷಣೆಗೆ ಧಾವಿಸಿದ ಸ್ಥಳೀಯರು:

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಸಾರ್ವಜನಿಕರು, ಜಖಂಗೊಂಡ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹರಸಾಹಸಪಟ್ಟು ಹೊರತೆಗೆದರು. ಬಳಿಕ ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಹಾಗೂ ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಸ್ಥಳಕ್ಕೆ ತಹಶೀಲ್ದಾರ್, ಪೊಲೀಸರ ಭೇಟಿ:

ವಿಷಯ ತಿಳಿಯುತ್ತಿದ್ದಂತೆ ಅಂಕೋಲಾ ತಹಶೀಲ್ದಾರ್ ನಿಶ್ಚಲ ನರೋನಾ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೂ ಭೇಟಿ ನೀಡಿದ ಅಧಿಕಾರಿಗಳು ಗಾಯಾಳುಗಳಿಗೆ ಸಮರ್ಪಕ ಹಾಗೂ ತ್ವರಿತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು. ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ವಾಹನಗಳ ತೆರವು ಕಾರ್ಯಾಚರಣೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು-ರಾಮೇಶ್ವರಂ ನಡುವೆ ವಿಶೇಷ ರೈಲುಗಳ ಸಂಚಾರ15 ದಿನದೊಳಗೆ ಗ್ರಾಮ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ 'ಗ್ಯಾರಂಟಿ ಸಮಿತಿ ರಚನೆ'ಗೆ ಸರ್ಕಾರ ಖಡಕ್ ಆದೇಶತಿರುಮಲದ ಕರ್ನಾಟಕ ಪ್ರವಾಸಿ ಸೌಧ ನಿರ್ವಹಣೆ KSTDCಗೆ: ಸಚಿವ ಕೆ.ಜೆ. ಜಾರ್ಜ್ವಿಶೇಷಚೇತನರ ಮಾಸಾಶನವನ್ನು 5,000 ರೂ.ಗೆ ಏರಿಕೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ‘ಆಕ್ಟಿವ್ ಕರ್ನಾಟಕ’ ಮೂಲಕ ಕ್ರೀಡೆ–ಪ್ರವಾಸೋದ್ಯಮ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ಪರಿಶಿಷ್ಟ ಪಂಗಡದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸುವುದೇ ನನ್ನ ಗುರಿ: ಸಚಿವ ಟಿ.ರಘುಮೂರ್ತಿBIG BREAKING: ತಾವು ಕರ್ತವ್ಯ ನಿರ್ವಹಿಸುವ 'ಕೇಂದ್ರ ಸ್ಥಾನ'ಗಳಲ್ಲೇ 'ಅಧಿಕಾರಿ, ಸಿಬ್ಬಂದಿ ವಾಸ' ಕಡ್ಡಾಯ: ರಾಜ್ಯ ಸರ್ಕಾರ ಆದೇಶಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮತBREAKING: ರಾಜ್ಯ ಸಚಿವ ಸಂಪುಟ ಸಭೆ ದಿಢೀರ್ ರದ್ದು, ಚುನಾವಣಾ ಆಯೋಗ ಮುಂದೆ ಸಿಎಂ ಸೇರಿ ಸಚವರು ಧರಣಿBREAKING: ಫಾರ್ಮ್-7 ಸಲ್ಲಿಕೆ ಅಕ್ರಮ: ಚು.ಆಯೋಗದ ಕಚೇರಿ ಎದುರು ಸಿಎಂ ಡಿ.ಕೆ. ಶಿವಕುಮಾರ್, ಸಚಿವರು ಧರಣಿ ಪ್ರತಿಭಟನೆ