LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸ್ಪಂದಿಸಿದ ಕರ್ನಾಟಕ ಸರ್ಕಾರ, 5 ಸಾವಿರ ರೂಪಾಯಿ ವೇತನ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ.

ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರು ಮುಷ್ಕರವನ್ನು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದರು.

ಇನ್ನು ಈಗಾಗಲೇ ಅಥಿತಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ಕೂಡ ನಮ್ಮ ಮುಂದೆ ಇಟ್ಟಿದ್ದರು. ವರ್ಕ್‌ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡುವ ಬಗ್ಗೆಯು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿಇಂದಿನಿಂದ ಮೇ 16ರವರೆಗೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!'ಸೈಬರ್‌ಕ್ರೈಮ್‌ ವಿರುದ್ದ ಸಮರ': ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಹ್ಯಾಂಡ್‌ಸೆಟ್‌ ಬ್ಲಾಕ್ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ಪ್ರಜ್ವಲ್ ರೇವಣ್ಣ ನಾಪತ್ತೆ: ಹುಡುಕಿ ಕೊಟ್ಟವರಿಗೆ ನಗದು ಬಹುಮಾನ ಘೋಷಣೆಹೀರೆಕಾಯಿ ಸಿಪ್ಪೆ ಚಟ್ನಿ ಮಾಡಿ ಸವಿಯಿರಿ‘ಕರಿಬೇವಿ’ನಲ್ಲಿದೆ ಈ ಆರೋಗ್ಯ ಭಾಗ್ಯಪ್ರಜ್ವಲ್ ರೇವಣ್ಣ ಅಶ್ಲೀ ಲ ವೀಡಿಯೋ ಕೇಸ್‌- ದೇವರಾಜೇ ಗೌಡ ಅರೆಸ್ಟ್‌ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ.!ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ