LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತ್ಯಾಚಾರಕ್ಕೊಳಗಾದ ಬಾಲಕಿ ತಾಯಿಗೆ ಯೋಗಿ ಭರವಸೆ : ಆರೋಪಿ ಶಾಪ್ ಧ್ವಂಸ

ಆಯೋಧ್ಯೆ : ಆಯೋಧ್ಯೆಯ ಭದ್ರಸಾದಲ್ಲಿ ಸಮಾಜವಾದಿ ನಾಯಕನಾಗಿ ಗುರುತಿಸಿಕೊಂಡಿರುವ ಮೋಯಿದ್ ಖಾನ್ ಹಾಗೂ ಆತನ ಮಾಲೀಕತ್ವದ ಬೇಕರಿಯಲ್ಲಿರುವ ಉದ್ಯೋಗಿ ರಾಜು ಜೊತೆ ಸೇರಿ 12 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ನಡೆಸಿದ್ದಾರೆ.

ಅತ್ಯಾಚಾರದ ವೇಳೆ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಬಳಿಕ ಕಳೆದ ಎರಡೂವರೆ ತಿಂಗಳಿನಿಂದ ವಿಡಿಯೋ ಹರಿಬಿಡುವುದಾಗಿ ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ್ದಾರೆ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಘಟನೆ ಕುರಿತು ಆಯೋಧ್ಯೆ ಸಂಸದ, ಸಮಾಜವಾದಿ ಪಾರ್ಟಿ ನಾಯಕ ಅವಧೇಶ್ ಪ್ರಸಾದ್ ಮೌನ ವಹಿಸಿದ್ದಾರೆ. ಸಂತ್ರಸ್ತೆ ತಾಯಿ ಇತ್ತೀಚೆಗೆ ಮುಖ್ಯಮಂತ್ರಿ ಕಚೇರಿಗೆ ತೆರಳಿ ನ್ಯಾಯಕ್ಕಾಗಿ ಅಂಗಲಾಚಿದ್ದರು.

ಈ ವೇಳೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈ ಘಟನೆ ಕುರಿತು ವರದಿ ತರಿಸಿಕೊಂಡು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಮುಖ ಆರೋಪಿ ಮೋಯಿದ್ ಖಾನ್ ಬೇಕರಿ ಶಾಪ್ ಮೇಲೆ ಬುಲ್ಡೋಜರ್ ನುಗ್ಗಿದೆ. ಅನಧಿಕೃತವಾಗಿ ಕಟ್ಟಲಾಗಿದ್ದ ಈ ಬೇಕರಿ ಶಾಪ್‌ನ್ನು ಧ್ವಂಸಗೊಳಿಸಲಾಗಿದೆ. ಇನ್ನು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ ಪುರಕಲಂದರ್ ಪೊಲೀಸ್ ಠಾಣೆಯ ಕೆಲ ಪೊಲೀಸ್ ಅಧಿಕಾರಿಗಳು ಅಮಾನತ್ತಾಗಿದ್ದಾರೆ.

ಸಂತ್ರಸ್ತೆ ಕುಟುಂಬ ಭೇಟಿಯಾಗಿರುವ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ತಪ್ಪತಸ್ಥರನ್ನು ಉಳಿಸುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಾಲಕಿಗೆ ನ್ಯಾಯ ಕೊಡಿಸುತ್ತೇನೆ ಎಂದು ಸಂತ್ರಸ್ತೆ ತಾಯಿಗೆ ಯೋಗಿ ಭರವಸೆ ನೀಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!