LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇಂದು ಎಸ್​ಐಟಿ ಕಸ್ಟಡಿಗೆ ಪಡೆದಿದೆ. ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಇದರ ಬೆನ್ನಲ್ಲೆ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶಿಸಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಬೆಳಕಿಗೆ ಬರುತ್ತಿದೆ. ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ.



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣ