LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅದಾನಿ ಗ್ರೂಪ್‌ಗೆ ಹೊಡೆತ ಕೊಟ್ಟ ಹಿಂಡೆನ್‌ಬರ್ಗ್ ವರದಿ.! - 10ರಲ್ಲಿ 9 ಷೇರುಗಳ ಬೆಲೆಯಲ್ಲಿ ಭಾರಿ ಕುಸಿತ

ನವದೆಹಲಿ: ಅಮೆರಿಕದ ಶಾರ್ಟ್-ಸೆಲ್ಲರ್ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್‌ನ ಆರೋಪಗಳು ಮತ್ತೊಮ್ಮೆ ಸಂಚಲನವನ್ನು ಸೃಷ್ಟಿಸುತ್ತಿವೆ. ಅದಾನಿ ಗ್ರೂಪ್ ಕಂಪನಿಗಳ ಷೇರು ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲು ಬಳಸಿದ ಮಾರಿಷಸ್ ನಿಧಿಯಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಪಾಲು ಹೊಂದಿದ್ದಾರೆ ಎಂಬ ಹಿಂಡೆನ್‌ಬರ್ಗ್ ಆರೋಪಗಳು ಷೇರುಪೇಟೆಗಳ ಮೇಲೆ ಗಂಭೀರ ಪರಿಣಾಮ ಬೀರಿವೆ.

ಇದರಿಂದಾಗಿ ಅದಾನಿ ಗ್ರೂಪ್‌ನ 10ರಲ್ಲಿ 9 ಷೇರುಗಳ ಬೆಲೆಯಲ್ಲಿ ಭಾರಿ ಕುಸಿತ ಕಂಡಿವೆ. ಅದರಲ್ಲೂ ಅದಾನಿ ಎನರ್ಜಿ ಸಲ್ಯೂಷನ್ಸ್ ಶೇಕಡಾ 17 ರಷ್ಟು ನಷ್ಟವನ್ನು ಅನುಭವಿಸಿದೆ. ಮಧ್ಯಾಹ್ನ 12.15ರ ವೇಳೆಗೆ ಅದಾನಿ ಸಮೂಹಕ್ಕೆ ಸೇರಿದ 10 ಷೇರುಗಳಲ್ಲಿ 9 ನಷ್ಟದಲ್ಲಿದ್ದವು. ಅಂಬುಜಾ ಸಿಮೆಂಟ್ಸ್‌ ಮಾತ್ರ ಲಾಭದಲ್ಲಿತ್ತು. ಅದು ಕೂಡ ದಿನದ ಆರಂಭದಲ್ಲಿ ನಷ್ಟದಲ್ಲೇ ವಹಿವಾಟು ಆರಂಭಿಸಿ ಸದ್ಯ ಅಲ್ಪ ಲಾಭದಲ್ಲಿದೆ.

ಅದಾನಿ ಟೋಟಲ್ ಗ್ಯಾಸ್ ಶೇ.13.39, ಎನ್​ಡಿಟಿವಿ ಶೇ.11 ಮತ್ತು ಅದಾನಿ ಪವರ್ ಶೇ.10.94 ರಷ್ಟು ಕುಸಿದಿದೆ. ಅದಾನಿ ಗ್ರೀನ್ ಎನರ್ಜಿ ಶೇರುಗಳು ಶೇಕಡಾ 6.96, ಅದಾನಿ ವಿಲ್ಮರ್ ಶೇಕಡಾ 6.49, ಅದಾನಿ ಎಂಟರ್‌ಪ್ರೈಸಸ್ ಶೇಕಡಾ 5.43, ಅದಾನಿ ಪೋರ್ಟ್ಸ್ ಶೇಕಡಾ 4.95, ಡೈವ್ಡ್, ಅಂಬುಜಾ ಸಿಮೆಂಟ್ಸ್ ಶೇಕಡಾ 2.53 ಮತ್ತು ಎಸಿಸಿ ಶೇಕಡಾ 2.42 ರಷ್ಟು ಕುಸಿದಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ