LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಧಿಕಾರಾವಧಿಯ ಕೊನೆ ದಿನ ಮಹತ್ವದ ನಿರ್ಧಾರ - ಮಗನಿಗೆ ದಯಾಮರಣ ಕೇಳಿದ್ದ ಪೋಷಕರಿಗೆ ಪರಿಹಾರ ಕಲ್ಪಿಸಿದ ಚಂದ್ರಚೂಡ್

ನವದೆಹಲಿ: ಸಿಜೆಐ ಆಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿಯ ಕೊನೆಯ ದಿನವೂ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅವರ ಮಧ್ಯಸ್ಥಿಕೆಯ ನಂತರ, 30 ವರ್ಷದ ಯುವಕನ ಪೋಷಕರಿಗೂ ಹೆಚ್ಚಿನ ಪರಿಹಾರ ಸಿಕ್ಕಿದೆ. ಹರೀಶ್ ರಾಣಾ ಎಂಬ ಯುವಕ ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದರು. ಇನ್ನು ಮಗನ ಖರ್ಚು ಭರಿಸಲು ಸಾಧ್ಯವಾಗದೆ ದಯಾಮರಣ ನೀಡುವಂತೆ ಪೋಷಕರು ಒತ್ತಾಯಿಸಿದ್ದರು.

ಚಂದ್ರಚೂಡ್ ಅವರು ಸಿಜೆಐ ಆಗಿದ್ದ ಅವಧಿಯಲ್ಲಿ ಮಧ್ಯಪ್ರವೇಶಿಸಿದ್ದರಿಂದ ಪೋಷಕರಿಗೆ ನೆಮ್ಮದಿ ಸಿಕ್ಕಂತಾಗಿದೆ. ಹೌದು. 30 ವರ್ಷದ ಹರೀಶ್ ರಾಣಾ ಎಂಬ ಯುವಕ ಮೊಹಾಲಿ ಓದುತ್ತಿರುವಾಗ ನಾಲ್ಕನೇ ಮಹಡಿಯಿಂದ ಬಿದ್ದಿದ್ದರಿಂದ ತಲೆಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದು, ಆತನ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಾಧ್ಯವಾಗದ ಹಿನ್ನೆಲೆ ಮಗನಿಗೆ ದಯಾಮರಣ ನೀಡಬೇಕೆಂದು ಆತನ ಪೋಷಕರು ನ್ಯಾಯಾಲಯದ ಮೊರೆ ಹೋಗಿದ್ದರು. ವೈದ್ಯಕೀಯ ಸಾಧನಗಳ ಸಹಾಯದಿಂದ ಮಗ ಜೀವಂತವಾಗಿದ್ದಾನೆ. ಜೀವಾಧಾರಕ ವ್ಯವಸ್ಥೆಯ ಸಾಧನಗಳನ್ನು ತೆಗೆದರೆ ಆತ ಸಾವನ್ನಪ್ಪುತ್ತಾನೆ. ಹಾಗಾಗಿ ಸಹಜ ಸಾವಿಗೆ ಪೋಷಕರು ಅನುಮತಿ ಕೇಳಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಡಿವೈ ಚಂದ್ರಚೂಡ ಅವರು ತಮ್ಮ ಕೆಲಸದ ಕೊನೆಯ ದಿನದಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಪೋಷಕರು ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲು ಅಶಕ್ತರಾಗಿರುವ ಕಾರಣ, ಕೋಮಾದಲ್ಲಿರುವ ಹರೀಶ್ ವೈದ್ಯಕೀಯ ವೆಚ್ಚವನ್ನು ಪೂರೈಸಲು ಕ್ರಮ ತೆಗೆದುಕೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಹರೀಶ್ ಪೋಷಕರಾದ ಅಶೋಕ್ ರಾಣಾ (62) ಮತ್ತು ನಿರ್ಮಲಾದೇವಿ ಹಲವು ವರ್ಷಗಳಿಂದ ಮಗನ ವೈದ್ಯಕೀಯ ವೆಚ್ಚಗಳನ್ನು ಭರಿಸುತ್ತಿದ್ದಾರೆ. ಯಾವಾಗ ಆರ್ಥಿಕ ಸ್ಥಿತಿ ಕುಸಿಯಲಾರಂಭಿಸಿಯೋ ಮಗನಿಗೆ ದಯಾಮರಣಕ್ಕೆ ಅನುಮತಿ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದರು. ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆ ಭವಿಷ್ಯದಲ್ಲಿ ಚಿಕಿತ್ಸಾ ವೆಚ್ಚ ಪಾವತಿಸಲು ಸಾಧ್ಯವಿಲ್ಲ ಎಂಬುದನ್ನು ಅರ್ಜಿಯಲ್ಲಿ ಅಶೋಕ್ ರಾಣಾ ಮತ್ತು ನಿರ್ಮಾಲಾದೇವಿ ಉಲ್ಲೇಖಿಸಿದ್ದರು. ಇದೀಗ ಮನೆಯಲ್ಲಿಯೇ ಹರೀಶ್ ರಾಣಾಗೆ ಚಿಕಿತ್ಸೆ ನೀಡಲು ಕೋರ್ಟ್ ಸೂಚನೆ ನೀಡಿದೆ. ಉತ್ತರ ಪ್ರದೇಶ ಸರ್ಕಾರವೇ ಹರೀಶ್ ಚಿಕಿತ್ಸೆಯನ್ನು ನೋಡಿಕೊಳ್ಳಬೇಕು. ಆನ್-ಕಾಲ್ ವೈದ್ಯಕೀಯ ಅಧಿಕಾರಿ ಮತ್ತು ಶುಶ್ರೂಷಾ ಸಲಹೆ ಜೊತೆ ಫಿಸಿಯೋಥೆರಪಿಸ್ಟ್ ಮತ್ತು ಆಹಾರ ತಜ್ಞರು ಭೇಟಿ ನೀಡುತ್ತಿರಬೇಕು. ಈ ಎಲ್ಲಾ ವೈದ್ಯಕೀಯ ಸೇವೆಯ ವೆಚ್ಚವನ್ನು ಉತ್ತರ ಪ್ರದೇಶ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!