LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ'- ಬುಲ್ಡೋಜರ್‌ ನ್ಯಾಯದ ವಿರುದ್ಧ ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ : ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಆರೋಪಿಗಳ ಮನೆ ಸೇರಿದಂತೆ ಇತರೆ ಆಸ್ತಿ ಪಾಸ್ತಿಗಳನ್ನು ನಾಶ ಮಾಡುವ ಬುಲ್ಡೋಜರ್ ನ್ಯಾಯದ ಹೆಸರಿನಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆಗೆ ಸದ್ಯ ಬ್ರೇಕ್‌ ಬಿದ್ದಿದೆ. ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಕೆಲವು ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಕಟ್ಟಡಗಳ ತೆರವಿಗೆ ಮಾರ್ಗಸೂಚಿ ಪ್ರಕಟಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ, ಬುಲ್ಡೋಜರ್ ಕಾರ್ಯಚರಣೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿತು. ಕಾರ್ಯಾಂಗವು ನ್ಯಾಯಾಂಗವನ್ನು ಅತಿಕ್ರಮಿಸಲು ಸಾಧ್ಯವಿಲ್ಲ, ಆರೋಪಿಯನ್ನು ಅಪರಾಧಿ ಎಂದು ನಿರ್ಧರಿಸಲು ಅಧಿಕಾರಿಗಳು ನ್ಯಾಯಾಧೀಶರಲ್ಲ. ಆರೋಪಿಯ ತಪ್ಪನ್ನು ಪೂರ್ವಾಗ್ರಹಕ್ಕೆ ಒಳಪಡಿಸಬಾರದು. ಕೇವಲ ಆರೋಪದ ಮೇಲೆ ನಾಗರಿಕರ ಮನೆಯನ್ನು ಅನಿಯಂತ್ರಿತವಾಗಿ ಕೆಡವುವುದು ಅಸಾಂವಿಧಾನಿಕ ಎಂದು ನ್ಯಾ. ಬಿ.ಆರ್ ಗವಾಯಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿ ಹಲವು ಮಾರ್ಗಸೂಚಿ ಪ್ರಕಟಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!