LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಅಧಿಕಾರಿಗಳ ವರ್ಗಾವಣೆ ಮನವಿ ಪುರಸ್ಕರಿಸುವುದಿಲ್ಲ'- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಗೆ ನೀಡುವಂತೆ ಸಚಿವರು ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು. ಸಚಿವರ ಒತ್ತಾಯಕ್ಕೆ ಸಿದ್ದರಾಮಯ್ಯ ಅವರು, ಕಳೆದ ವರ್ಷ ವರ್ಗಾವಣೆ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆಗಳು ಬಂದಿದ್ದವು. ಹೀಗಾಗಿ ಈ ವಿಚಾರವನ್ನು ಕೈಗೆತ್ತಿಕೊಳ್ಳದಿರುವುದು ಜಾಣತನ. ಈ ವಿಷಯ ಇಲ್ಲಿಗೆ ಬಿಟ್ಟು ಬಿಡಿ ಎಂದರು.

ಅಧಿಕಾರಿಗಳ ವರ್ಗ-1 ಮತ್ತು ಇದರ ಮೇಲಿನ ಅಧಿಕಾರಿಗಳ ವರ್ಗಾವಣೆಯನ್ನು ಸಿಎಂ ನಿರ್ವಹಿಸುತ್ತಾರೆ, ಆದರೆ ಕೆಳ ಹಂತದ ಅಧಿಕಾರಿಗಳ ವರ್ಗಾವಣೆಯನ್ನು ಸಚಿವರು ಮತ್ತು ಶಾಸಕರು ನಡೆಸುತ್ತಾರೆ. ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಸುಮಾರು ಶೇ. 6 ರಿಂದ 8 ರಷ್ಟು ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಮಾಡಲಾಗುತ್ತದೆ. ಆದರೆ, ಈ ವರ್ಷ ಜೂ.6 ರತನಕ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರವು ವರ್ಗಾವಣೆ ಮಾಡಿಲ್ಲ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಅಧಿಕಾರಿಗಳ ವರ್ಗಾವಣೆಗೆ ಭಾರಿ ಒತ್ತಡ ಹಾಕಲಾಗುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!