LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ನಿಗೂಢವಾಗಿ ಸಾವು

ಲಕ್ನೋ : ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ಅ.24ರಂದು ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಸುರ್ಜಿತ್ ಸಿಂಗ್ ಅವರ ಸಾವಿಗೆ ಇನ್ನೂ ಸ್ಪಷ್ಟ ಕಾರಣ ತಿಳಿದುಬಂದಿದ್ದಾರೆ. ಸುರ್ಜಿತ್ ಸಿಂಗ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಹಾಗಾಗಿ ಮೆದುಳು ರಕ್ತಸ್ರಾವದಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್, ಡಿಎಂ ಚಂದ್ರ ವಿಜಯ್ ಸಿಂಗ್, ಸಂಸದ ಅವಧೇಶ್ ಪ್ರಸಾದ್, ಮೇಯರ್ ಗಿರೀಶ್ಪತಿ ತ್ರಿಪಾಠಿ, ಅಯೋಧ್ಯೆ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ ಘಟನೆ ಬಗ್ಗೆ ಕುಟುಂಬ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ ಅವರ ವಚನ….!ಆಪರೇಷನ್‌ ಸಿಂದೂರ್:ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ವೀಡಿಯೊ ಹರಿದು ಬಿಟ್ಟ ವಿದ್ಯಾರ್ಥಿನಿ ಬಂಧನ'ಲೂಟಿಕೋರ ರಾಜ್ಯ ಸರಕಾರದ ವಿರುದ್ಧ ಜನರು ಬೀದಿಗಿಳಿಯುವ ದಿನ ಬರಲಿದೆ'-ಡಿ.ವಿ.ಸದಾನಂದಗೌಡಹಿಮಾಚಲ ಪ್ರದೇಶದ ಹಳ್ಳಿಯಲ್ಲಿ ಪಾಕಿಸ್ತಾನದ ಗುರುತಿರುವ ಬಲೂನ್ ಪತ್ತೆಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಬೃಹತ್ ಪ್ರತಿಭಟನೆಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿSSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: 'DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ'- ಸಿಎಂ ಸೂಚನೆರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್