LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನಂತ್ ಅಂಬಾನಿ ಮದುವೆಗೆ ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರ ಮದುವೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ.

ಬಂಧಿತನ್ನು ವಡೋದರ ನಿವಾಸಿ ವಿರಾಲ್ ಶಾ(32) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಈತ, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿ ಪೋಸ್ಟ್ ಮಾಡಿದ್ದಾನೆ. ಆತನ ಪೋಸ್ಟ್ ಆಧರಿಸಿ ತನಿಖೆ ನಡೆಸಿದಾಗ ಆತ ವಡೋದರದಲ್ಲಿ ಇರುವ ಬಗ್ಗೆ ಮಾಹಿತಿ ದೊರೆತಿದ್ದು, ಆತನನ್ನು ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ಇಂದು ಬೆಳಗ್ಗೆ ಬಂಧಿಸಿದೆ.

ಆರೋಪಿಯು ತನ್ನ ಎಕ್ಸ್ ಖಾತೆಯಲ್ಲಿ 'ಅಂಬಾನಿ ಕುಟುಂಬದ ಮದುವೆಯಲ್ಲಿ ಬಾಂಬ್ ಸ್ಫೋಟಗೊಂಡರೆ ನಾಳೆ ಅರ್ಧ ಜಗತ್ತು ತಲೆಕೆಳಗಾಗಲಿದೆ ಎನ್ನುವ ಯೋಚನೆ ನನ್ನ ತಲೆಯಲ್ಲಿ ಬರುತ್ತಿದೆ' ಎಂದು ಪೋಸ್ಟ್ ಮಾಡಿದ್ದನು.

ಅನಂತ್ ಅಂಬಾನಿ ರಾಧಿಕಾ ಮರ್ಚೆಂಟ್ ವಿವಾಹದಲ್ಲಿ ದೇಶದ ಹಾಗೂ ದೇಶದ ದೊಡ್ಡ ದೊಡ್ಡ ವ್ಯಕ್ತಿಗಳು ಭಾಗವಹಿಸಿದ್ದರು. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜುಲೈ 12ರಂದು ವಿವಾಹ ಸಮಾರಂಭ ನಡೆಯಿತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST