ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಬಿದ್ದು 14 ಮಂದಿ ಸಾವು.!
ಮುಂಬೈ: ಮುಂಬೈನಲ್ಲಿ ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮದಿಂದ 14ಕ್ಕೆ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಯಲ್ಲಿ 74 ಜನ ಗಾಯಗೊಂಡಿದ್ದಾರೆ.. ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಜನ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.
ಮಧ್ಯಾಹ್ನ ಇದ್ದಕ್ಕಿದ್ದಂತೆ ದೂಳು ಸಹಿತ ಭಾರಿ ಬಿರುಗಾಳಿ ಬೀಸಿತು. ಈ ವೇಳೆ ಘಾಟ್ಕೋಪರ್ ಪ್ರದೇಶದ ಚೆಡ್ಡಾನಗರದಲ್ಲಿ 100 ಅಡಿ ಎತ್ತರದ ಜಾಹೀರಾತು ಫಲಕವು ಪೆಟ್ರೋಲ್ ಪಂಪ್ ಮೇಲೆ ಬಿದ್ದಿತ್ತು.
ಸ್ಥಳದಲ್ಲಿದ್ದ, ಹಲವರು ಫಲಕದಡಿ ಸಿಲುಕಿಕೊಂಡಿ ದ್ದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.