LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನೈತಿಕ ಫೋಟೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಕೊಪ್ಪ: ಸಾಮಾಜಿಕ ಜಾಲತಾಣದಲ್ಲಿ ಅನೈತಿಕ ಫೋಟೋಗಳು ವೈರಲ್ ಆಗುತ್ತಿದ್ದ ಅವಮಾನ ತಾಳಲಾರದೆ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏನಿದು ಪ್ರಕರಣ?

ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೊಪ್ಪ ಕಾಲೇಜೊಂದರ ವಿದ್ಯಾರ್ಥಿನಿ ಕೆಲ ಅನ್ಯಧರ್ಮೀಯ ಯುವಕರ ಜೊತೆ ಕಾಡೊಂದರಲ್ಲಿ ಸಿಕ್ಕಿಬಿದ್ದಳೆಂದು ಫೋಟೋಗಳು ರಾಜ್ಯಾದ್ಯಂತ ದಿಢೀರ್ ವೈರಲ್ ಆಗಿದ್ದವು. ಘಟನೆ ಕುರಿತಂತೆ ಮಾಹಿತಿ ನೀಡಿದ್ದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾಟೆ ವಿಕ್ರಂ ‘ಈ ಘಟನೆ ನಡೆದು ವಾರಗಳು ಕಳೆದಿವೆ. ಸಾಮಾಜಿಕ ಜಾಲತಾಣದಲ್ಲಿ ಹರಡತ್ತಿರುವಂತೆ ಯಾವುದೇ ಘಟನೆ ಸಂಭವಿಸಿರಲಿಲ್ಲ’ ಎಂದಿದ್ದರು.

ಅಸಲಿ ಕಥೆ ಏನು?

ಕೊಪ್ಪ ತಾಲ್ಲೂಕಿನ ಕಪಿನ ಎಂಬಲ್ಲಿ 15 ದಿನದ ಹಿಂದೆ ಈ ಘಟನೆ ನಡೆದಿತ್ತು. ಮೂವರು ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಹಾಗೂ ಯುವಕರ ಮೇಲೆ ಸ್ಥಳೀಯ ಸಂಘಟನೆಯವರು ಎನ್ನಲಾದ ಕೆಲವರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದಾದ ಬಳಿಕ ಕಳೆದ ಮೂರು ದಿನಗಳಿಂದ ಆಕೆ ಯುವಕರ ಜೊತೆಗಿರುವ ಫೋಟೋಗಳು ರಾಜ್ಯಾದ್ಯಂತ ವೈರಲ್ ಆಗಿತ್ತು. ಈ ಹಿನ್ನಲೆ ಅವಮಾನ ತಾಳಲಾರದೆ ವಿದ್ಯಾರ್ಥಿನಿ ಕಾಲೇಜು ಆವರಣದಲ್ಲೇ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಬಳಿಕ ಎಚ್ಚೆತ್ತ ಪೊಲೀಸರು ಇದೀಗ ನೈತಿಕ ಪೊಲೀಸ್ ಗಿರಿ ನಡೆಸಿದವರ ವಿರುದ್ಧ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಈ ಮೊಬೈಲ್ ಸಂಖ್ಯೆಗಳಲ್ಲಿ `G-Pay-Phonepe’ ಕಾರ್ಯನಿರ್ವಹಿಸುವುದಿಲ್ಲಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯ ಬಂಧನಮನೆ ನಿರ್ಮಾಣ ಸಬ್ಸಿಡಿ ಹೆಚ್ಚಳ: ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಿಸಲು ರಾಜ್ಯ ಸರ್ಕಾರದ ನಿರ್ಧಾರಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್ಬೋರ್ ವೆಲ್ ಕೊರೆಸಲು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಉಡುಪಿ: ಸಿನಿಮಾ ಶೈಲಿಯ ಕಾರ್ಯಾಚರಣೆ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌..! ಕಾರಿನಲ್ಲಿದ್ದ ಇಸಾಕ್ ನ ಗೆಳತಿಯ ಬಂಧನಉತ್ತರಾಖಂಡದ ಮುಖ್ವಾ ದೇವಸ್ಥಾನದಲ್ಲಿ ಪ್ರಧಾನಿ ಮೋದಿ 'ಗಂಗಾ ಆರತಿ'