ಅನ್ನ ಭಾಗ್ಯದ ಜೊತೆ ನಗದು ಬದಲು ದಿನಿಸಿ ಕಿಟ್ ವಿತರಣೆಗೆ ಸರಕಾರ ಸಜ್ಜು.!
ಬೆಂಗಳೂರು:ಹೌದು ಇನ್ಮುಂದು ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ ಅಕ್ಕಿ ಜತೆಗೆ ನೀಡುತ್ತಿರುವ ನಗದು ಬದಲು ದಿನಸಿ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.!
ಅಡುಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ದಿನಸಿ ಕಿಟ್ನಲ್ಲಿ ಇರಲಿದೆ. ಈ ಕುರಿತು ಆಹಾರ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೊಳಿಸಲು ಸಿದ್ಧತೆ ನಡೆದಿದೆ.
ಅನ್ನಭಾಗ್ಯದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಘೋಷಿಸಿತ್ತು. ಅಷ್ಟು ಪ್ರಮಾಣದ ಅಕ್ಕಿ ಲಭ್ಯವಾಗದೇ ಇದ್ದಾಗ, ಐದು ಕೆ.ಜಿ ಅಕ್ಕಿ ಜತೆಗೆ, ಉಳಿದ ಐದು ಕೆ.ಜಿ ಲೆಕ್ಕದಲ್ಲಿ ನಗದು ನೀಡುವ ಯೋಜನೆ ಜಾರಿಗೊಳಿಸಿತ್ತು. ನಗದಿನ ಬದಲು ದಿನಸಿ ನೀಡುವ ಯೋಜನೆ ಜಾರಿಗೆ ಬರಲಿದೆಯಂತೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.