LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿಗೆ ಯೋಗಿ ಸರ್ಕಾರದಿಂದ ಭರ್ಜರಿ ಸಿದ್ಧತೆ

ಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಈ ಬಾರಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಯೋಗಿ ಸರ್ಕಾರ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಯೋಜನೆಯನ್ನು ಯೋಗಿ ಸರ್ಕಾರ ಹಾಕಿಕೊಂಡಿದೆ. ದೀಪಾವಳಿಯಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿಯಾಗುವುದನ್ನು ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ವಿಶೇಷ ಮೇಣದ ದೀಪಗಳನ್ನು ಬಳಸಲಾಗುತ್ತದೆ. ದೀರ್ಘಕಾಲದವರೆಗೆ ಈ ದೀಪಗಳು ಬೆಳಗಲಿವೆ. ಈ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯೂ ಪ್ರಮುಖವಾಗಿರಲಿದೆ. ಈ ದೀಪಾವಳಿಯಲ್ಲಿ ಅಯೋಧ್ಯೆಯನ್ನು ಕೇವಲ ಧರ್ಮ ಮತ್ತು ನಂಬಿಕೆಯ ಕೇಂದ್ರವನ್ನಾಗಿ ಮಾಡದೆ, ಸ್ವಚ್ಛತೆ ಮತ್ತು ಪರಿಸರ ಪ್ರಜ್ಞೆಯ ಸಂಕೇತವನ್ನಾಗಿ ಮಾಡುವ ಗುರಿಯನ್ನು ದೇವಾಲಯದ ಟ್ರಸ್ಟ್ ಹೊಂದಿದೆ. 2,000 ಕ್ಕೂ ಹೆಚ್ಚು ಮೇಲ್ವಿಚಾರಕರು, ಉಸ್ತುವಾರಿಗಳು ಮತ್ತು ಇತರ ಸದಸ್ಯರ ಮಾರ್ಗದರ್ಶನದಲ್ಲಿ 30,000 ಕ್ಕೂ ಹೆಚ್ಚು ಸ್ವಯಂಸೇವಕರು 28 ಲಕ್ಷ ದೀಪಗಳನ್ನು ಸರಯೂ ನದಿಯ ಉದ್ದಕ್ಕೂ 55 ಸಾಲುಗಳಲ್ಲಿ ಅಲಂಕರಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ವಿಶೇಷ ಹೂವಿನ ಅಲಂಕಾರದಿಂದ ಕಂಗೊಳಿಸಲಿರುವ ರಾಮ ಮಂದಿರ ಸಂಕೀರ್ಣವನ್ನು ಅಲಂಕಾರಕ್ಕಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗಕ್ಕೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡಲಾಗಿದೆ. ಬೆಳಕು, ಪ್ರವೇಶ ಕಮಾನು ಅಲಂಕಾರಗಳು ಮತ್ತು ಸಂಪೂರ್ಣ ಶುಚಿಗೊಳಿಸುವಿಕೆಯ ಒಟ್ಟಾರೆ ಮೇಲ್ವಿಚಾರಣೆಯನ್ನು ಬಿಹಾರ ಕೇಡರ್‌ನ ನಿವೃತ್ತ ಐಜಿ ಅಶು ಶುಕ್ಲಾ ಅವರಿಗೆ ವಹಿಸಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌