LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅರಿವು ಶೈಕ್ಷಣಿಕ ಸಾಲ ಯೋಜನೆ ಪಡೆಯಲು ಯಾವ ಅರ್ಹತೆಗಳು ಇರಬೇಕು.? ಇಲ್ಲಿದೆ ಡೀಟೈಲ್.!

 

ಚಿತ್ರದುರ್ಗ :ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸುವವರು ಸಿ.ಇ.ಟಿ, ಎನ್.ಇ.ಇ.ಟಿ(ನೀಟ್) ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸು ಹಾಗೂ ಪಿ.ಹೆಚ್.ಡಿಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.00 ಲಕ್ಷ ಸಾವನ್ನು ಶೇ.2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ. ವ್ಯಾಸಂಗ ಪೂರ್ಣಗೊಂಡ 04 ತಿಂಗಳ ವಿರಾಮಾವಧಿ ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರು ಪಾವತಿಸಬೇಕು. ಅರ್ಜಿದಾರರು 18-35 ವರ್ಷದೊಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 6.00 ಲಕ್ಷ ಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು kacdc.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರನು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು). ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಖಾಯಂ ವಿಳಾಸವು ರಾಜ್ಯದಲ್ಲಿರಬೇಕು. ಅರ್ಜಿದಾರನು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ರಷ್ಟು ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 9448451111 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!