ಸಾಮಾನ್ಯವಾಗಿ ಭಾರತೀಯರು ತಮ್ಮ ಅಡುಗೆಗಳಲ್ಲಿ ಅರಿಶಿನವನ್ನು ಬಳಸಿಯೇ ಬಳಸಿರುತ್ತಾರೆ. ಆದರೆ ಪ್ರತಿದಿನ ಒಂದು ಚಿಟಿಕೆ ಅರಿಶಿನ ಬೆರೆಸಿದ ನೀರನ್ನು ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು.
* ಬೆಳಗ್ಗೆ ಅರಿಶಿನ ನೀರು ಸೇವನೆಯಿಂದ ದೇಹವು ಕೊಬ್ಬನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುತ್ತದೆ.
* ಅರಿಶಿನದ ನೀರು ಜೀರ್ಣಕಾರಿ ಕಿಣ್ವಗಳಲ್ಲಿ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ.
* ಮೈಯಲ್ಲಿ ಗಾಯಗಳಿದ್ದರೆ ಅರಿಶಿನ ನೀರನ್ನು ಕುಡಿಯುವುದರಿಂದ ಗಾಯವು ಮಾಗುತ್ತದೆ.
* ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಅಲ್ಜೈಮೆರ್ ಕಾಯಿಲೆಯ ಮಟ್ಟವನ್ನು ಕಡಿಮೆಗೊಳಿಸಿ, ಈ ಮರೆವಿನ ಕಾಯಿಲೆಯು ಬಾರದಂತೆ ತಡೆಯುತ್ತದೆ.
* ವಯಸ್ಸಾದಂತೆ ಕೀಲುಗಳಲ್ಲಿನ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.
* ನಿಯಮಿತವಾಗಿ ಅರಿಶಿನ ನೀರು ಕುಡಿಯುವುದರಿಂದ ಮೆದುಳಿನ ಕಾರ್ಯವು ಸುಧಾರಿಸುತ್ತದೆ.
* ಹೊಟ್ಟೆ ಉಬ್ಬರ, ಮಲಬದ್ಧತೆ ಮತ್ತು ಇತರ ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರಾಗಿಸುತ್ತದೆ.
* ಅರಿಶಿನ ನೀರು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
* ಅರಿಶಿನದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು ಚರ್ಮವನ್ನು ಕಾಂತಿಯುತ ಹಾಗೂ ಆರೋಗ್ಯಕರವಾಗಿರಿಸುತ್ತದೆ.
* ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅನಾರೋಗ್ಯ ಸಮಸ್ಯೆ ಬಾರದಂತೆ ನೋಡಿಕೊಳ್ಳುತ್ತದೆ.
* ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಕೊಲೆಸ್ಟ್ರಾಲ್ ಮಟ್ಟ ಹಾಗೂ ರಕ್ತದೊತ್ತಡವನ್ನು ಕಡಿಮೆಗೊಳಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.