Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್: ಸರಳ ವಿವಾಹ 50,000 ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50,000/- ನೀಡಲಾಗುವುದು. 

ಅರ್ಜಿ ಸಲ್ಲಿಸುವ ವಿಧಾನ :

ವಧು, ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನ ಟ್ರಸ್ಟ್ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 5,000/-ಗಳನ್ನು ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.            

ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 5 ಜೋಡಿಗಳು ಭಾಗವಹಿಸಿರತಕ್ಕದ್ದು, ವಧುವಿಗೆ ಕನಿಷ್ಠ 18 ವರ್ಷದಿಂದ 42 ವರ್ಷಗಳು, ವರನಿಗೆ ಕನಿಷ್ಠ 21 -45 ವರ್ಷ ವಯಸ್ಸು ಆಗಿರತಕ್ಕದ್ದು. ವಧುವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ 5.00 ಲಕ್ಷಗಳನ್ನು ಮೀರತಕ್ಕದ್ದಲ್ಲ.

ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡೊಲಾಗುವುದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ.

ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220206ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ibl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯ ಹಿತ್ತಲಲ್ಲಿ ಬೃಹತ್ ಹೆಬ್ಬಾವು ಪತ್ತೆ | WATCH VIDEOರಷ್ಯಾ ಸೇನೆಗೆ ಸೇರಿದ ಭಾರತೀಯರೆಷ್ಟು? ಎಷ್ಟು ಮಂದಿ ಸಾವು, ಎಷ್ಟು ಜನ ನಾಪತ್ತೆ? ಸುಪ್ರೀಂಕೋರ್ಟ್‌ಗೆ ಕೇಂದ್ರದ ಮಾಹಿತಿಭಾರತದಲ್ಲಿ CJP ಪ್ರತಿಭಟನೆಗೆ ಅಮೆರಿಕದಿಂದ ಹಣಕಾಸು ನೆರವು ? ಗಾಯಕಿ ಮೇರಿ ಮಿಲ್ಬೆನ್‌ ಗಂಭೀರ ಆರೋಪ!ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆಕಬ್ಬು ಬೆಳೆಗಾರರ ಬೇಡಿಕೆ ಪರಿಶೀಲನೆಗೆ ಕೇಂದ್ರದ ಮಹತ್ವದ ಕ್ರಮ: ರಮೇಶ್ ಚಂದ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆಹಬ್ಬದ ಹೊತ್ತಲ್ಲೇ ರೈಲ್ವೆ ನೌಕರರಿಗೆ ಬಂಪರ್ ಕೊಡುಗೆ: 78 ದಿನಗಳ ಬೋನಸ್ ಗೆ ಮೋದಿ ಸಂಪುಟ ಅನುಮೋದನೆದೇಶವನ್ನೇ ಬೆಚ್ಚಿಬೀಳಿಸಿದ್ದ ಮೀರತ್ ‘ನೀಲಿ ಡ್ರಮ್ ಹತ್ಯೆ ಪ್ರಕರಣ’: ಪತ್ನಿ, ಪ್ರಿಯಕರನಿಗೆ ಮರಣದಂಡನೆಕರ್ನಾಟಕದಲ್ಲಿ ಹಿಂಗಾರು ಮಳೆ ನಿರೀಕ್ಷೆ: ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚಿನ ಎಚ್ಚರಿಕೆ; IMD ಮುನ್ಸೂಚನೆ ಏನು?15,000 ಲಂಚ ಪಡೆಯುತ್ತಿದ್ದಾಗಲೇ ಹೆಸ್ಕಾಂ ಅಧಿಕಾರಿ, ಗುತ್ತಿಗೆದಾರ ಲೋಕಾಯುಕ್ತ ಬಲೆಗೆBREAKING: ಜೆಡಿಎಸ್ ಸೋಶಿಯಲ್ ಮೀಡಿಯಾ ತಂಡದ ಯುವಕ ಪೊಲೀಸರು ವಶಕ್ಕೆ: HDK ಕಿಡಿ