16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ನಂತರ ಶವವನ್ನು ನದಿಗೆ ಎಸೆದಿರುವ ಆಘಾತಕಾರಿ ಪ್ರಕರಣ ಅಸ್ಸಾಂನಲ್ಲಿ ವರದಿಯಾಗಿದೆ. ಪ್ರಕರಣ ಸಂಬಂಧ ವ್ಯಕ್ತಿಯೊಬ್ಬನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
https://bcsuddi.com/%e0%b2%85%e0%b2%a5%e0%b3%8d%e0%b2%b2%e0%b2%bf%e0%b2%9f%e0%b3%8d-%e0%b2%ae%e0%b3%87%e0%b2%b2%e0%b3%86-%e0%b2%b9%e0%b2%b2%e0%b3%8d%e0%b2%b2%e0%b3%86%e0%b2%97%e0%b3%86-%e0%b2%af%e0%b2%a4%e0%b3%8d/
ಗುವಾಹಟಿಯಲ್ಲಿರುವ ಕಮ್ರೂಪ್ (ಮೆಟ್ರೋ) ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಫೋನ್ ರೀಚಾರ್ಜ್ ಮಾಡಿಸಲು ಮನೆಯಿಂದ ತೆರಳಿದ ಬಳಿಕ ವಾಪಸ್ ಬಂದಿರಲಿಲ್ಲ. ಹುಡುಕಾಟ ನಡೆಸಿದಾಗ ಆಕೆಯ ಶವ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದೆ. ಇದರಿಂದ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಶೀಘ್ರ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.