LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಆಟಿಡೊಂಜಿ ದಿನ' ಕಾರ್ಯಕ್ರಮದಲ್ಲಿ ದೈವ ನರ್ತಿಸುವಂತೆ ಕುಣಿದ ಮಹಿಳೆ- ವೀಡಿಯೋ ವೈರಲ್, ತುಳುವರ ಆಕ್ರೋಶ

ಮಂಗಳೂರು: ಇತ್ತೀಚಿಗೆ ಕರಾವಳಿಯಲ್ಲಿ ಸಮೂಹ ಸನ್ನಿಗೊಳಗಾದವರಂತೆ ವಿವಿಧ ಸಂಘಸಂಸ್ಥೆಗಳು ಆಟಿಡೊಂಜಿ ದಿನ, ಕೆಸರ್‌ಡೊಂಜಿ ದಿನ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಅದೇ ರೀತಿ ಕಳೆದ ರವಿವಾರ 4ಬೀಟ್ಸ್ ತಂಡದಿಂದ ಯೆಯ್ಯಾಡಿಯಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮದಲ್ಲಿ ಎಡವಟ್ಟು ಆಗಿದ್ದು, ತುಳುವರು ಗರಂ ಆಗಿದ್ದಾರೆ.

ಕಾರ್ಯಕ್ರಮದಲ್ಲಿ ತುಳುಗೀತೆಯೊಂದಕ್ಕೆ ಕವಿತಾ ಎಂಬ ಮಹಿಳೆಯೊಬ್ಬರು ದೈವಾವೇಶಕ್ಕೆ ಒಳಗಾದವರಂತೆ, ಕೊಡಿಯಡಿಯಲ್ಲಿ ದೈವ ನರ್ತಿಸುವಂತೆ ಕುಣಿದಿದ್ದಾರೆ. ಇದರ ವೀಡಿಯೋ ಈಗ ವೈರಲ್ ಆಗಿದೆ‌. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತುಳುವರು ಗರಂ ಆಗಿದ್ದಾರೆ. ಅದರಲ್ಲೂ ತುಳುಪರ ಹೋರಾಟಗಾರ ರೋಶನ್ ಅವರು ಸಂಘಟನೆಯ ಆಯೋಜಕರಿಗೆ, ದೈವ ನರ್ತನವನ್ನು ಅನುಕರಣೆ ಮಾಡಿರುವ ಮಹಿಳೆಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ‌. ಮಹಿಳೆ ದೈವಸ್ಥಾನದ ಎದುರು ನಿಂತು ಕ್ಷಮೆ ಯಾಚಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಇದರ ಆಡಿಯೋ ಕೂಡಾ ವೈರಲ್ ಆಗಿದೆ. ಕಾರ್ಯಕ್ರಮ ಆಯೋಜಿಸಿದ 4ಬೀಟ್ಸ್ ತಂಡ ಆ ಬಳಿಕ ವೀಡಿಯೋ ಮಾಡಿ ದೈವ ನರ್ತನದ ಅನುಕರಣೆ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಅವರು ಭಕ್ತಿಯಿಂದ ನರ್ತಿಸಿದ್ದೇ ಹೊರತು, ಅವಮಾನ ಮಾಡಿದ್ದಲ್ಲ ಎಂದು ಸಮರ್ಥಿಸಿಕೊಂಡಿದೆ. ಆದರೆ ದೈವನರ್ತನ, ದೈವಾವೇಶದ ಬಗ್ಗೆ ಕರಾವಳಿಗರಿಗೆ ಅದರದ್ದೇ ಆದ ನಂಬಿಕೆ, ಭಕ್ತಿಯಿದೆ. ದೈವದ ಚಪ್ಪರದಡಿ ನಡೆಯಬೇಕಿದ್ದ ಆಚರಣೆಯೊಂದು ಮನೋರಂಜನಾ ಕಾರ್ಯಕ್ರಮವಾಗಿ ಬಳಕೆಯಾಗಿರುವುದು ತುಳುವರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ತುಳುವರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸಂಘಟಕರು ಹಾಗೂ ದೈವ ಆವೇಶದ ಅನುಕರಣೆ ಮಾಡಿರುವ ಮಹಿಳೆ ತೆಪ್ಪಗಾಗಿದ್ದಾರೆ ಎಂದು ತಿಳಿದು ಬಂದಿದೆ.

 

" ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ."
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನ