LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಂದು ಕೊನೆಯ ದಿನ - 1 ಗಂಟೆಯಲ್ಲಿ 3.39 ಲಕ್ಷ ITR ಸಲ್ಲಿಕೆ

ನವದೆಹಲಿ: ಜುಲೈ 31 ರಂದು ಮಧ್ಯಾಹ್ನ 12 ಗಂಟೆಯವರೆಗೆ 11 ಲಕ್ಷಕ್ಕೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ (ITR) ಗಳನ್ನು ತೆರಿಗೆದಾರರು ಸಲ್ಲಿಸಿದ್ದಾರೆ. ಈ ಪೈಕಿ 3.39 ಲಕ್ಷ ತೆರಿಗೆ ರಿಟರ್ನ್ಸ್ ಅನ್ನು ಕಳೆದ 1 ಗಂಟೆಯಲ್ಲಿ ಸಲ್ಲಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹಂಚಿಕೊಂಡ ಮಾಹಿತಿ ತಿಳಿಸಿದೆ. ಐಟಿಆರ್ ಸಲ್ಲಿಸುವ ಗಡುವು ಇಂದು (ಜುಲೈ 31) ಕೊನೆಗೊಳ್ಳಲಿದ್ದು, ಸರ್ಕಾರ ಅದನ್ನು ವಿಸ್ತರಿಸುವ ಸಾಧ್ಯತೆಯಿಲ್ಲ. ವ್ಯಕ್ತಿಗಳು ಮತ್ತು ಎಚ್‌ಯುಎಫ್‌ಗಳಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಅಂದರೆ ಜುಲೈ 31 ಕೊನೆಯ ದಿನಾಂಕವಾಗಿದ್ದು, ಭಾನುವಾರ ಒಂದೇ ದಿನ 2.7 ಮಿಲಿಯನ್ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್‌ಸೈಟ್ ಭಾನುವಾರ ಸಂಜೆ 6:30ರ ವೇಳೆಗೆ 1.3 ಕೋಟಿಗೂ ಹೆಚ್ಚು ಲಾಗಿನ್‌ಗಳಿಗೆ ಸಾಕ್ಷಿಯಾಗಿದ್ದು, ಆದಾಯ ತೆರಿಗೆ ಇಲಾಖೆಯ ಪ್ರಕಾರ, ಭಾನುವಾರ ಸಂಜೆ 6.30 ರವರೆಗೆ ಸುಮಾರು 26.76 ಲಕ್ಷ ಐಟಿಆರ್‌ಗಳನ್ನು ಸಲ್ಲಿಸಲಾಗಿದೆ. ಜುಲೈ 30ರವರೆಗೆ 6 ಕೋಟಿಗೂ ಹೆಚ್ಚು ಐಟಿಆರ್‌ಗಳನ್ನು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ತೆರಿಗೆ ವೃತ್ತಿಪರರು ಮತ್ತು ಚಾರ್ಟರ್ಡ್ ಅಕೌಂಟೆಂಟ್‌ಗಳು ಗಡುವನ್ನು ವಿಸ್ತರಿಸುವ ಸಾಧ್ಯತೆಯಿಲ್ಲ ಎಂದು ಹೇಳಿದ್ದರಿಂದ ಭಾನುವಾರ ರಿಟರ್ನ್ಸ್ ಸಲ್ಲಿಕೆಗೆ ನೂಕುನುಗ್ಗಲು ಕಂಡುಬಂದಿದೆ. AY 2023-24 ಗಾಗಿ ಐಟಿಆರ್ ಅನ್ನು ಸಲ್ಲಿಸದ ಎಲ್ಲರಿಗೂ, ಕೊನೆಯ ಕ್ಷಣದ ಗೊಂದಲ ತಪ್ಪಿಸಿಕೊಳ್ಳಲು ತಮ್ಮ ಐಟಿಆರ್ ಅನ್ನು ಆದಷ್ಟು ಬೇಗ ಸಲ್ಲಿಸುವಂತೆ ತೆರಿಗೆ ಇಲಾಖೆ ಭಾನುವಾರ ಸಂಜೆ ಟ್ವೀಟ್‌ ಮೂಲಕ ಒತ್ತಾಯಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿ