LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆನ್‍ಲೈನ್ ಬೆಟ್ಟಿಂಗ್: ಜಾಹೀರಾತು ನಿಲ್ಲಿಸುವಂತೆ ಮಾಧ್ಯಮಗಳಿಗೆ ಕೇಂದ್ರ ಎಚ್ಚರಿಕೆ

ನವದೆಹಲಿ: ಆನ್‍ಲೈನ್ ಬೆಟ್ಟಿಂಗ್ ಪ್ಲಾಟ್‍ಫಾರ್ಮ್‍ಗಳ ಕುರಿತಾದ ಜಾಹೀರಾತುಗಳ ವಿಚಾರವಾಗಿ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಎಚ್ಚರಿಕೆ ಸೂಚನೆ ನೀಡಿದೆ. ಮಾಧ್ಯಮಗಳು ತಕ್ಷಣ ಇಂತಹ ಜಾಹೀರಾತುಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ಸೂಚಿಸಿದೆ.

ಟಿವಿ ಚಾನೆಲ್‍ಗಳು, ಡಿಜಿಟಲ್ ಮೀಡಿಯಾ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಬೆಟ್ಟಿಂಗ್ ಹಾಗೂ ಜೂಜು ಸಂಬಂಧಿತ ಜಾಹೀರಾತುಗಳನ್ನು ತಡೆಯುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚಿಸಿದೆ. ಇಂತಹ ಜಾಹೀರಾತುಗಳಿಗೆ ಪಾವತಿಸಲು ಕಪ್ಪು ಹಣ ಬಳಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸಚಿವಾಲಯ ತಿಳಿಸಿದೆ.

ವಿಶೇಷವಾಗಿ ಕ್ರಿಕೆಟ್‍ನಲ್ಲಿ ಬೆಟ್ಟಿಂಗ್ ಮತ್ತು ಜೂಜಿನ ವೇದಿಕೆಗಳ ಪ್ರಚಾರವನ್ನು ಹೆಚ್ಚಿಸುವ ಪ್ರವೃತ್ತಿ ಇದೆ. ಶೀಘ್ರದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸಚಿವಾಲಯ ಕ್ರಮಕ್ಕೆ ಮುಂದಾಗಿದೆ. ಆದೇಶವನ್ನು ಪಾಲಿಸಲು ವಿಫಲವಾದರೆ ಸೂಕ್ತ ಕಾಯಿದೆಗಳ ಅಡಿಯಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST