LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ ಎಂದು ಬಿಎಲ್ ಸಂತೋಷ್ ಉತ್ತರಿಸಲಿ' - ಪ್ರಿಯಾಂಕ್ ಖರ್ಗೆ

ಬೆಂಗಳೂರು :ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿಂದೆ ಬಿಎಲ್ ಸಂತೋಷ್ 40-45 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ ಕುರಿತು ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ಮೊದಲು ಅವರ ಶಾಸಕರು, ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ ಎಂದರು. ಅಲ್ಲದೆ, ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಸವಾಲು ಹಾಕಿದರು.

ಆರ್​ಎಸ್​ಎಸ್​​ನವರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಹೋಗಿ ಪಾಠ ಹೇಳುತ್ತಾರೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ. ಸಂತೋಷ್ ಪಡೆ ಕಟ್ಟಲು ಲಿಂಗಾಯತರಿಗೆ ಟಿಕೆಟ್ ನೀಡಿಲ್ಲ ಈ ಬಗ್ಗೆ ಮೊದಲು ಸಂತೋಷ್ ಉತ್ತರ ನೀಡಲಿ, ನಂತರ ಶಾಸಕರ ಬಗ್ಗೆ ಮಾತನಾಡಲಿ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯ