Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್‌ : ಅಮಾನತು ಆದೇಶಕ್ಕೆ ಕೆಎಟಿ ತಡೆ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಕಲಬುರಗಿ ಪೀಠ ತಡೆ ನೀಡಿದೆ.
ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಅಣ್ಣಾಸಾಹೇಬ ದೇಶಮುಖ್ ಅವರು ತಮ್ಮ ಅಮಾನತು ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಮೊರೆ ಹೋಗಿದ್ದರು.
ಆರ್‌ಎಸ್‌ಎಸ್‌ನ ಸಮವಸ್ತ್ರ ಧರಿಸಿ 2025ರ ಅಕ್ಟೋಬರ್‌ 10ರಂದು ಹುಣಸಗಿಯಲ್ಲಿ ನಡೆದ ಪಥಸಂಚಲನದಲ್ಲಿ ಭಾಗವಹಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆಗಸ್ಟ್‌ 20ರಂದು ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿತ್ತು. ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಇಲಾಖೆಯು ಈ ಶಿಸ್ತು ಕ್ರಮ ಕೈಗೊಂಡಿತ್ತು. ಈ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿಯೂ ವಿವಾದಕ್ಕೆ ಕಾರಣವಾಗಿದ್ದು, ಶಿಕ್ಷಕರ ಅಮಾನತು ಕ್ರಮದ ವಿರುದ್ಧ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾಗಿತ್ತು. ಬಳಿಕ ಶಿಕ್ಷಕರು ಪರಿಹಾರ ಕೋರಿ ಕೆಎಟಿ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆಯ ವೇಳೆ ಶಿಕ್ಷಕರು, ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದುದನ್ನು ಯಾವುದೇ ರೀತಿಯ ದುರ್ನಡತೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ವಾದಿಸಿದರು. ಇಲಾಖೆಯಿಂದ ನೀಡಲಾದ ಕಾರಣ ಕೇಳುವ ನೋಟಿಸ್‌ಗೆ ಸಲ್ಲಿಸಿದ್ದ ಉತ್ತರದಲ್ಲಿ, ಕಾರ್ಯಕ್ರಮವು ಭಾನುವಾರ ನಡೆದಿದ್ದು ತಮ್ಮ ಕರ್ತವ್ಯ ಸಮಯದ ಹೊರತಾದ ಅವಧಿಯಲ್ಲಿ ನಡೆದಿತ್ತು ಎಂದು ತಿಳಿಸಿದ್ದಾರೆ. ಅಲ್ಲದೆ, ಪಥಸಂಚಲನವು ರಾಜಕೀಯ ಕಾರ್ಯಕ್ರಮವಲ್ಲ; ಸಾಂಸ್ಕೃತಿಕ ಚಟುವಟಿಕೆಯ ಭಾಗವಾಗಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆದರೆ ಶಿಕ್ಷಕರ ಈ ಸಮರ್ಥನೆಯನ್ನು ಇಲಾಖೆ ತಿರಸ್ಕರಿಸಿತ್ತು. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಶಿಕ್ಷಕರು ಉಲ್ಲಂಘಿಸಿದ್ದಾರೆ ಎಂದು ಇಲಾಖೆ ಆರೋಪಿಸಿತ್ತು. ವಿಶೇಷವಾಗಿ ಶಿಕ್ಷಕರಂತಹ ಜವಾಬ್ದಾರಿಯುತ ಹುದ್ದೆಯಲ್ಲಿರುವ ಸರ್ಕಾರಿ ನೌಕರರು ರಾಜಕೀಯ ಸ್ವರೂಪದ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂದು ಇಲಾಖೆ ತನ್ನ ನಿಲುವು ವ್ಯಕ್ತಪಡಿಸಿತ್ತು.

ಈ ಪ್ರಕರಣದ ಹಿಂದೆ ಶಿಕ್ಷಕರ ವಿರುದ್ಧ ದಾಖಲಾಗಿದ್ದ ದೂರುಗಳೂ ಕಾರಣವಾಗಿದ್ದವು. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾ ಅಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರು ಆಗಿನ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದೂರು ಸಲ್ಲಿಸಿ, ಸರ್ಕಾರಿ ನೌಕರರಾಗಿರುವ ಶಿಕ್ಷಕರು ದುರ್ನಡತೆ ಎಸಗಿದ್ದಾರೆ ಎಂದು ಆರೋಪಿಸಿದ್ದರು.
ಸರ್ಕಾರಿ ನೌಕರರು ರಾಜಕೀಯ ಸಂಘಟನೆಗಳ ಸದಸ್ಯರಾಗುವುದಕ್ಕೂ, ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಗಳೊಂದಿಗೆ ಸಂಪರ್ಕ ಹೊಂದುವುದಕ್ಕೂ ಅವಕಾಶವಿಲ್ಲ. ಅಲ್ಲದೆ, ಪ್ರತಿಭಟನೆಗಳು ಮತ್ತು ಆಂದೋಲನಗಳಲ್ಲಿ ಭಾಗವಹಿಸುವುದೂ ನಿಯಮಬಾಹಿರ ಎಂದು ಇಲಾಖೆ ಹೇಳಿತ್ತು. ದೂರುಗಳು ಹಾಗೂ ವರದಿಗಳ ಆಧಾರದ ಮೇಲೆ ಶಿಕ್ಷಕರಿಗೆ ನೋಟಿಸ್‌ ಜಾರಿಗೊಳಿಸಿ, ನಂತರ ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಮಾಡಲಾಗಿತ್ತು.
ಗುರುರಾಜ ಜೋಶಿ ಮತ್ತು ಅಣ್ಣಾಸಾಹೇಬ ದೇಶಮುಖ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೆಎಟಿ ಕಲಬುರಗಿ ಪೀಠವು ಗುರುವಾರ ಅಮಾನತು ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ. ಈ ಮಧ್ಯಂತರ ಆದೇಶದಿಂದ ಇಬ್ಬರು ಶಿಕ್ಷಕರಿಗೆ ರಿಲೀಫ್‌ ದೊರೆತಿದ್ದು, ಇಲಾಖಾ ತನಿಖೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರೆ ವಿಚಾರಣೆಗಳು ಮುಂದಿನ ದಿನಗಳಲ್ಲಿ ಸಂಬಂಧಿತ ಪ್ರಾಧಿಕಾರಗಳ ಮುಂದೆ ಮುಂದುವರಿಯಲಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ