E-PAPER
17 Nov 2026, 12:19:52 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆಶಾ ಕಾರ್ಯಕರ್ತೆಯರಿಗೆ ಇಲಾಖೆತರ ಕೆಲಸ: ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ.

ಬೆಳಗಾವಿ-07:ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಇಲಾಖೆಗೆ ಸಂಬಂಧಿಸದ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳ ಮನೆಮನೆ ವಿತರಣಾ ಕಾರ್ಯಕ್ಕೆ ನಿಯೋಜಿಸಿರುವ ಸರ್ಕಾರದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು 'ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಪತ್ರಿಭಟಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಆಶಾ ಕಾರ್ಯಕರ್ತತೆಯರಿಗೆ ಯಾಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಎದುರು ಅಳಲು ತೊಂಡಿಕೊಂಡರು.
ಆಶಾ ಕಾರ್ಯಕರ್ತೆಯರು, ಮೂಲ ಆರೋಗ್ಯ ಸೇವೆಗೆ ಧಕ್ಕೆ ಆತಂಕವನ್ನು ಎದುರಿಸುತ್ತಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರೋಗ್ಯ ಸೇವೆಯ ಬೆನ್ನೆಲುಬಾಗಿರುವ ಆಶಾ ಕಾರ್ಯಕರ್ತೆಯರು ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳ ಪಾಲನೆ ಹಾಗೂ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳ ಸುಗಮ ನಿರ್ವಹಣೆಯ ಜವಾಬ್ದಾರಿ ಹೊತ್ತು ಕೆಸಲವನ್ನು ಮಾಡುತ್ತಿದ್ದಾರೆ.
ಇಂತಹ ಸಮಯದಲ್ಲಿ ಅವರಿಗೆ ಆರೋಗ್ಯ ಇಲಾಖೆಗೆ ಸಂಬಂಧಪಡದ ಇಲಾಖೆತರ ಕೆಲಸಗಳನ್ನು ವಹಿಸುವುದರಿಂದ ಮೂಲ ಆರೋಗ್ಯ ಸೇವೆಗಳ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಗತ್ಯ ಸೌಲಭ್ಯಗಳ ಕೊರತೆ: ಹೆಚ್ಚುವರಿ ಕಾರ್ಯಕ್ಕೆ ಯಾವುದೇ ರೀತಿಯ ಸಂಭಾವನೆ, ಪ್ರಯಾಣ ಭತ್ಯೆ ಅಥವಾ ಸ್ಮಾರ್ಟ್ಫೋನ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಲ್ಲ. ಅನೇಕ ಕಾರ್ಯಕರ್ತೆಯರ ಬಳಿ ಸ್ಮಾರ್ಟ್ಫೋನ್ ಇಲ್ಲದಿರುವುದರಿಂದ ಡಿಜಿಟಲ್ ಕಾರ್ಯಗಳನ್ನು ನಿರ್ವಹಿಸುವುದು ಕಷ್ಟಸಾಧ್ಯವಾಗಿದೆ. ಅಲ್ಲದೆ, ಇಲಾಖೆತರ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಿಗೆ ಸಿಗಬೇಕಾದ ನಿಯಮಿತ ಪ್ರೋತ್ಸಾಹಧನಕ್ಕೂ ಧಕ್ಕೆಯಾಗಲಿದೆ ಎಂದರು.
ಇಲಾಖೆಯ ಆಯುಕ್ತರ ಆದೇಶದಂತೆ ಇಲಾಖೆತರ ಕೆಲಸಗಳಿಗೆ ಸೂಕ್ತ ಸಂಭಾವನೆ ಹಾಗೂ ಇಲಾಖೆಯ ಅನುಮೋದನೆ ಕಡ್ಡಾಯ. ಆದರೆ ಪ್ರಸ್ತುತ ಆದೇಶದಲ್ಲಿ ಈ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಆಶಾ ಕಾರ್ಯಕರ್ತೆಯರು ಈ ಕೆಲಸದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಸಂಘ ಮಖಂಡರು ಅಸಮಾಧಾನ ಹೋರ ಹಾಕಿದರು.
ಸಂಘದ ಪ್ರಮುಖ ಬೇಡಿಕೆಗಳು: ಆಶಾ ಕಾರ್ಯಕರ್ತೆಯರನ್ನು ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳ ಮನೆಮನೆ ವಿತರಣಾ ಕಾರ್ಯದಿಂದ ತಕ್ಷಣವೇ ಕೈಬಿಡಬೇಕು.
ಒಂದು ವೇಳೆ ಈ ಕಾರ್ಯವನ್ನು ಆಶಾಗಳಿಂದಲೇ ಮಾಡಿಸುವುದಾದರೆ, ಸರ್ಕಾರವು ಸೂಕ್ತ ಸಂಭಾವನೆ, ಪ್ರಯಾಣ ಭತ್ಯೆ, ಸ್ಮಾರ್ಟ್ಫೋನ್ ಹಾಗೂ ಅಗತ್ಯ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯದ ಎಲ್ಲ ಅಂಗನವಾಡಿ ಆಶಾ ರಾಜ್ಯ ಸರ್ಕಾರದ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು, ಅಧ್ಯಕ್ಷರು, ಪದಾಧಿಕಾರಿಗಳು,ಕಾರ್ಯದರ್ಶಿಗಳು ಸೇರಿದಂತೆ ಹಲವು ಕಾರ್ಯಕರ್ತರು  ಉಪಸ್ಥಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.