LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆ.06ರಂದು ಈರುಳ್ಳಿ, ಟೊಮಾಟೋ, ಮೆಣಸಿನಕಾಯಿ ಮತ್ತು ಬದನೆಕಾಯಿ ಬೆಳೆಗಳ  ಸುಧಾರಿತ ಬೇಸಾಯ ತಾಂತ್ರಿಕತೆಗಳು ಕುರಿತು ತರಬೇತಿ.!

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 06ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಈರುಳ್ಳಿ, ಟೊಮಾಟೋ, ಮೆಣಸಿನಕಾಯಿ ಮತ್ತು ಬದನೆಕಾಯಿ ಬೆಳೆಗಳ  ಸುಧಾರಿತ ಬೇಸಾಯ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ತರಬೇತಿ ಕಾರ್ಯಕ್ರಮದಲ್ಲಿ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ತೋಟಗಾರಿಕೆ ತಜ್ಞರಾದ ಡಾ. ಪ್ರಕಾಶ್ ಕೆರೂರ್ ಮತ್ತು ಡಾ. ಶ್ರುತಿ ಅವರು“ಈರುಳ್ಳಿ, ಟೊಮಾಟೋ, ಮೆಣಸಿನಕಾಯಿ ಮತ್ತು ಬದನೆಕಾಯಿ ಬೆಳೆಗಳಲ್ಲಿ ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಕೆವಿಕೆ ಬಬ್ಬೂರು ಕೀಟಶಾಸ್ತçಜ್ಞ ಟಿ.ರುದ್ರಮುನಿ ಅವರು ಈ ಬೆಳೆಗಳಲ್ಲಿ ಬರುವ ಪ್ರಮುಖ ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.

ಆಸಕ್ತ 50 ಜನರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಆರ್.ರಜನೀಕಾಂತ, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (9845249832) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‌ಐಡಿಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲ