E-PAPER
17 Nov 2026, 12:21:56 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆ.13ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ

ಬೆಳಗಾವಿ-06: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಪರ ಗೊತ್ತುವಳಿ ಅಂಗೀಕಾರ, ಕಾವೇರಿ ನದಿ ನೀರು ಹಂಚಿಕೆ ಹಾಗೂ ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದು ಹಿರಿಯ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ಧಿಗೋಷ್ಠಿ ಯಲ್ಲಿ ಮಾತನಾಡಿದ ರವರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಪರ ಗೊತ್ತುವಳಿ ಅಂಗೀಕರಿಸಿದರೆ ಪಾಲಿಕೆಯನ್ನು ಸೂಪರ್ಸೀಡ್ ಮಾಡುವಂತೆ ಒತ್ತಾಯಿಸುವ ಸಚಿವರ ನಡೆ ಸರಿಯಲ್ಲ ಎಂದು ಟೀಕಿಸಿದರು.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಹಿತಾಸಕ್ತಿಗಳನ್ನು ಸಮರ್ಪಕವಾಗಿ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಮಹದಾಯಿ, ಕಳಸಾ-ಬಂಡೂರಿ, ಕಾವೇರಿ ಹಾಗೂ ಕೃಷ್ಣಾ ನದಿ ನೀರಿನ ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರದ ಮುಂದೆ ರಾಜ್ಯದ ಪರವಾಗಿ ಪ್ರಬಲ ವಾದ ಮಂಡಿಸಿಲ್ಲ ಎಂದು ಆರೋಪಿಸಿದರು.
ಬೆಳಗಾವಿಯಲ್ಲಿ ಕನ್ನಡ ಉಳಿವಿಗಾಗಿ ಹಲವು ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸಿದ್ದು, ಅವರೊಂದಿಗೆ ತಾವು ಸದಾ ಇರುತ್ತೇನೆ ಎಂದ ಅವರು, ಗಡಿನಾಡಿನ ಸಮಸ್ಯೆಗಳ ಬಗ್ಗೆ ರಾಜಕಾರಣಿಗಳಿಗೆ ನಿಜವಾದ ಕಾಳಜಿ ಇಲ್ಲ. ಕನ್ನಡವನ್ನು ಗಟ್ಟಿಗೊಳಿಸಲು ಕನ್ನಡ ಸಂಘಟನೆಗಳೇ ಪ್ರಮುಖ ಪಾತ್ರ ವಹಿಸಿವೆ ಎಂದು ಹೇಳಿದರು.
ಕನ್ನಡ ಪರ ಹೋರಾಟಕ್ಕಾಗಿ ಬೆಳಗಾವಿಯಲ್ಲಿ ಯಾವುದೇ ಸಂಸದರು ಅಥವಾ ಶಾಸಕರು ಬೀದಿಗಿಳಿದು ಹೋರಾಟ ನಡೆಸಿಲ್ಲ. ಅಲ್ಲದೆ, ರಾಜ್ಯದ ಸಚಿವರು ಹಾಗೂ ಮುಖ್ಯಮಂತ್ರಿಗಳು ಬೆಳಗಾವಿಯ ಸಮಸ್ಯೆಗಳ ಕುರಿತು ಸಮರ್ಪಕವಾಗಿ ಧ್ವನಿ ಎತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಗೊತ್ತುವಳಿ ಪಕ್ಷಾತೀತವಾಗಿ ಅಂಗೀಕರಿಸಬೇಕು. ನಿರ್ಣಯ ಕೈಗೊಂಡರೂ ಅಥವಾ ಕೈಗೊಳ್ಳದಿದ್ದರೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಈ ವೇಳೆ ಕನ್ನಡ ಹೋರಾಟಗಾರ ಅಶೋಕ ಚಂದರಗಿ, ಮಹಾಂತೇಶ ರಣಗಟ್ಟಿಮಠ, ಮಹಾದೇವ ತಳವಾರ, ಮಹೇಶ ಶಿಗಿಹಳ್ಳಿ, ವಾಜೀದ್ ಹಿರೇಕುಡಿ, ಬಸವರಾಜ ಉಪ್ಪಾರ, ಸೋಮು ರೈನಾಪುರೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಉಪಸ್ಥಿರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.