ಇಂದಿನಿಂದ ಆ.6 ವರೆಗೆ ಈ ಜಿಲ್ಲೆಗಳಿಗೆ ಭಾರೀ ಮಳೆ.! ಈ ಜಿಲ್ಲೆಗಳಿಗೆ ಸಾಧಾರಣ ಮಳೆ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಆ.6 ರವರೆಗೆ ಭಾರಿ ಮಳೆಯಾಗಲಿದ್ದು, ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ . ಕರಾವಳಿ ಭಾಗದಲ್ಲಿ 35 ರಿಂದ 55 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಬೀದರ್, ಕೊಡಗು, ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.