LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ:18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ(ಜೂ.24) ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿಯೂ ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ ಇದೆ.

ಅಧಿವೇಶನದ ಮೊದಲ ದಿನ, ಏಳು ಬಾರಿ ಸಂಸದರಾಗಿದ್ದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಯನ್ನು ಪ್ರತಿಪಕ್ಷಗಳು ನಿರ್ಧರಿಸಿವೆ. ಹಿರಿತನದ ಆಧಾರದಲ್ಲಿ ಸಂಸದ ಕೆ.ಸುರೇಶ್ ಈ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಎಂದು ಕಾಂಗ್ರೆಸ್ ಹೇಳುತ್ತಿದೆ.

ಆದರೆ, ಪ್ರಸಕ್ತ ಲೋಕಸಭೆಯಲ್ಲಿ ಸತತವಾಗಿ ಸತತವಾಗಿ ಸೋಲನುಭವಿಸದೆ ಸಂಸದರಾಗಿ ಸೇವೆ ಸಲ್ಲಿಸಿದ ವಿಚಾರದಲ್ಲಿ ಮಹತಾಬ್ ಹಿರಿಯರು ಎಂಬುದು ಸರ್ಕಾರದ ನಿಲುವು. ಸೋಮವಾರ ಸದನದ ಕಲಾಪ ಪ್ರಾರಂಭವಾಗುವ ಮೊದಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು ಅವರು ಮಹತಾಬ್ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಬೋಧಿಸಲಿದ್ದಾರೆ.

ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಹೊಸದಾಗಿ ಆಯ್ಕೆಯಾದ ಸಂಸದರ ಪಟ್ಟಿಯನ್ನು ಮೊದಲು ಮಂಡಿಸಲಿದ್ದಾರೆ. ಮೊದಲ ದಿನದ ಅಧಿವೇಶನದಲ್ಲಿ ಮೋದಿ ಮತ್ತವರ ಸಂಪುಟ ಸದಸ್ಯರು ಸೇರಿದಂತೆ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ 264 ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Delhi Election 2025: ಮುಖ್ಯಮಂತ್ರಿ ಅತಿಶಿಗೆ ಗೆಲುವು Delhi Election 2025 : ಮನೀಶ್ ಸಿಸೋಡಿಯಾಗೆ ಸೋಲು Delhi Election 2025 : 3182 ಮತಗಳಿಂದ ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲುದೆಹಲಿ ಚುನಾವಣಾ ಫಲಿತಾಂಶ : ಶಿಷ್ಯನಿಗೆ ಕ್ಲಾಸ್‌ ತಗೊಂಡ ಅಣ್ಣಾ ಹಜಾರೆ …!ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರ