LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿರಾ ಕ್ಯಾಂಟೀನ್‌ಗಳು ಮುಚ್ಚಲಾಗಿರುವ ಬಗ್ಗೆ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ವಿಜಯೇಂದ್ರ

ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಪಕ್ಷದವರು ಈಗೇನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲಾಗಿದೆ ಎಂಬ ವರದಿಯ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂದಿನ ಸರ್ಕಾರದಲ್ಲಿ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಗಳನ್ನು ತೆರೆದಿರುವ ಬಗ್ಗೆ ಹೆಮ್ಮೆಪಟ್ಟು ಕೊಂಡಿದ್ದ ಕಾಂಗ್ರೆಸ್ಸಿಗರೇ, ಕಳೆದ ಬಾರಿಯ ನಮ್ಮ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಕ್ಯಾಂಟೀನ್ ಗಳನ್ನು ನಾವು ಮುಚ್ಚಿಸಲು ಹೊರಟಿದ್ದೇವೆ ಎಂದು ಅಪಪ್ರಚಾರ ನಡೆಸಿದಿರಿ. ಆದರೆ ಈಗೇನಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಬಡವರು ಹಾಗೂ ಶ್ರಮಿಕ ವರ್ಗದವರಿಗೆ ಹಸಿವು ನೀಗಿಸುತ್ತಿದ್ದ ನಿಮ್ಮದೇ ಯೋಜನೆಯ ಇಂದಿರಾ ಕ್ಯಾಂಟೀನ್ ಮುಚ್ಚಿಸುತ್ತಿದ್ದೀರಿ. ಬಡವರ ಬಗ್ಗೆ, ಹಸಿದವರ ಬಗ್ಗೆ, ನಿಮಗೆ ಪ್ರಾಮಾಣಿಕ ಕಾಳಜಿ ಇದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಮಾತ್ರ ಕೇಂದ್ರೀಕರಿಸಿರುವ ನೀವು ಅದನ್ನೂ ಪರಿಪೂರ್ಣವಾಗಿ ನಿಭಾಯಿಸಲಾಗದೆ, ಆರ್ಥಿಕ ಸಮತೋಲನ ಕಾಯ್ದುಕೊಳ್ಳಲಾಗದೆ, ರಾಜ್ಯದ ಬೊಕ್ಕಸ ಬರಿದು ಮಾಡಿ ಹಿಂದುಳಿದವರು, ದಲಿತರ ಕಲ್ಯಾಣ ಕಾರ್ಯಗಳನ್ನು ಮೂಲೆಗೊತ್ತಿ ಇದೀಗ ಬೀದಿಬದಿ ವ್ಯಾಪಾರ ಮಾಡಿ ಜೀವನ ಸಾಗಿಸುವ ಶ್ರಮಿಕ ವರ್ಗ ಹಾಗೂ ಬಡವರಿಗೆ ಹಸಿವು ನೀಗಿಸುವ ತಾಣವಾಗಿದೆ ಎಂದು ಹೇಳಿಕೊಳ್ಳುತ್ತಿದ್ದ ನಿಮ್ಮ ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದ್ದಾರೆ.

ನಿಮ್ಮ ಸರ್ಕಾರದ ಕಾರ್ಯವೈಖರಿ ನೋಡಿದರೆ ಕರ್ನಾಟಕದ ಚಲನಶೀಲತೆಗೆ ತುಕ್ಕು ಹಿಡಿಸಲು ಹೊರಟಂತಿದೆ. ಇಂದಿರಾ ಕ್ಯಾಂಟೀನ್ ಗೆ ಆಗುತ್ತಿರುವ ಗತಿಯೇ ಬಡವರ ಇತರ ಯೋಜನೆಗಳಿಗೂ ಆಗುವುದು ನಿಶ್ಚಿತ ಎಂಬುದು ಸರ್ಕಾರದ ಆರ್ಥಿಕ ಸ್ಥಿತಿಗತಿಯನ್ನು ಗಮನಿಸಿದರೆ ವೇದ್ಯವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳು