ಇಂದು ಈ ಕಾರಣಕ್ಕೆ ಭಾರತ್ ಬಂದ್ .!
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ದಲಿತ ಮತ್ತು ಆದಿವಾಸಿ ಸಂಘಟನೆಗಳು ಬುಧವಾರ ಭಾರತ ಬಂದ್ಗೆ ಕರೆ ನೀಡಿವೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್ಎಸಿಡಿಎಒಆರ್) ಸರ್ಕಾರದ ಮುಂದಿಟ್ಟಿದೆ.
ಭಾರತ ಬಂದ್ ಅಂಗವಾಗಿ ವಿವಿಧೆಡೆ ಆಯೋಜಿಸುವ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ದಲಿತರು, ಆದಿವಾಸಿಗಳು ಮತ್ತು ಒಬಿಸಿ ಸಮುದಾಯದವರಿಗೆ ಒಕ್ಕೂಟವು ಮನವಿ ಮಾಡಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.