ಇಂದು ನಟ ದರ್ಶನ್ ಅವರ ಜಾಮೀನು ಅರ್ಜಿ ತೀರ್ಪು ಪ್ರಕಟ.!
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಇಂದು ಬುಧವಾರ ಪ್ರಕಟಿಸಲಿದೆ.
ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಲು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ಕುರಿತಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠದಲ್ಲಿ ಮಂಗಳವಾರ ದರ್ಶನ್ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದೆ.
ಕೆಲಕಾಲ ವಾದ ಆಲಿಸಿದ ನ್ಯಾಯಪೀಠ ಬುಧವಾರ ಆದೇಶ ನೀಡುವುದಾಗಿ ಪ್ರಕಟಿಸಿದೆ. ಇಂದು ದರ್ಶನ್ ಗೆ ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಎಲ್ಲರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.