LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಸಿಬಿಐ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ

ದೆಹಲಿ: ಸಿಬಿಐ ಬಂಧನ ಪ್ರಶ್ನಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಸಿಬಿಐ ಬಂಧನ ಪ್ರಶ್ನಿಸಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೋಮವಾರ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ಕೇಜ್ರಿವಾಲ್ ಅವರ ಅರ್ಜಿಯ ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು . ಬಳಿಕ ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಬಿಐ ಬಂಧಿಸಿತ್ತು.

ಜೂನ್ 29 ರಂದು, ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12 ರವರೆಗೆ ವಿಚಾರಣಾ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಅವರ ಹೆಸರು ಪ್ರಮುಖ ಪಿತೂರಿದಾರರಲ್ಲಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವ ಕಾರಣ, ಅವರ ಹೆಚ್ಚಿನ ಕಸ್ಟಡಿ ವಿಚಾರಣೆ ಅಗತ್ಯವಾಗಬಹುದು ಎಂದು ಹೇಳಿದೆ.

ಕೇಜ್ರಿವಾಲ್ ಅವರು ತನಿಖಾ ತಂಡದೊಂದಿಗೆ ಸಹಕರಿಸುತ್ತಿಲ್ಲ. ಮೂರು ದಿನಗಳ ಕಸ್ಟಡಿಯಲ್ಲಿ ನುಣುಚಿಕೊಳ್ಳುವ ಉತ್ತರವನ್ನು ನೀಡಿದ್ದಾರೆ ಎಂದು ಸಿಬಿಐ ತಿಳಿಸಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್ಕೋಚಿಂಗ್ ಪಡೆಯದೆ UPSCಯಲ್ಲಿ 6ನೇ ರ್‍ಯಾಂಕ್‌ ಪಡೆದ ಗೆಹಾನಾ ನವ್ಯಾ ಜೇಮ್ಸ್