ಇಂದು 21 ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.! ಆ ಜಿಲ್ಲೆಗಳು ಇವು.?
ಬೆಂಗಳೂರು: ರಾಜ್ಯದಾದ್ಯಂತ ಭಾನುವಾರವೂ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 21 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಬಾಗಲಕೋಟೆ ಹಾಗೂ ಬೀದರ್ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಉಡುಪಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಸ್ಥಳದಲ್ಲಿ 30–40 ಕಿ.ಮೀ. ವೇಗದಲ್ಲಿ, ಉತ್ತರ ಒಳನಾಡಿನಲ್ಲಿ 40–50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇದೇ 24ರವರೆಗೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.