LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇದು ಪಂಚ ಗ್ಯಾರಂಟಿಗಳ ಬಳಿಕ ಮತ್ತೊಂದು ಮಹಿಳಾ ಸಬಲೀಕರಣದ ಮೈಲಿಗಲ್ಲು

ಬೆಂಗಳೂರು: ಕರ್ನಾಟಕ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ಘೋಷಿಸಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಹರ್ಷ ವ್ಯಕ್ತಪಡಿಸಿ, ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

*ಮಹಿಳೆಯರ ಬಹುದಿನಗಳ ಬೇಡಿಕೆಗೆ ಸ್ಪಂದನೆ*
ಈ ನಿರ್ಧಾರವನ್ನು "ಒಂದು ದಿಟ್ಟ ಹೆಜ್ಜೆ" ಎಂದು ಬಣ್ಣಿಸಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಈ ಮೂಲಕ ಕರ್ನಾಟಕ ಸರ್ಕಾರವು ಮಹಿಳೆಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದೆ. "ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರು ಅನುಭವಿಸುವ ನೋವು ಮತ್ತು ಆರೋಗ್ಯದ ಸೂಕ್ಷ್ಮತೆಯನ್ನು ಗುರುತಿಸಿ ವೇತನ ಸಹಿತ ರಜೆ ಘೋಷಿಸಿರುವುದು, ಮಹಿಳೆಯರ ಸ್ವಾವಲಂಬನೆಗೆ ಮತ್ತು ಆರೋಗ್ಯಕ್ಕೆ ಒಂದು ದಾರಿ ಮಾಡಿಕೊಟ್ಟಿದೆ" ಎಂದು ಅವರು ತಿಳಿಸಿದ್ದಾರೆ.

*ಇದು ಪಂಚ ಗ್ಯಾರಂಟಿಯ ಮುಂದುವರಿದ ಭಾಗ:*
ಕರ್ನಾಟಕ ಸರ್ಕಾರವು ಈಗಾಗಲೇ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸರಣಿಯಲ್ಲಿ ಇದೊಂದು ಮಹತ್ವದ ಮುಂದುವರಿಯಾಗಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ.
"ಈಗಾಗಲೇ ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಶಕ್ತಿ ಯೋಜನೆಗಳ ಮೂಲಕ ನಮ್ಮ ಸರ್ಕಾರವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಒಂದು ಮೈಲಿಗಲ್ಲು ಸಾಧಿಸಿದೆ. ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಈ ಕ್ರಮಗಳ ಬೆನ್ನಲ್ಲೇ, ದೈಹಿಕ ಆರೋಗ್ಯಕ್ಕೆ ಸಂಬಂಧಿಸಿದ ಈ ನಿರ್ಧಾರವು ಮಹಿಳೆಯರ ಪಾಲಿಗೆ ಮತ್ತಷ್ಟು ಸ್ವಾವಲಂಬನೆ ಶಕ್ತಿ ತುಂಬಿದೆ" ಎಂದು ಅವರು ಹೇಳಿದ್ದಾರೆ.

ಈ ರಜಾ ನೀತಿಯು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಖಾಸಗಿ ವಲಯ, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು, ಮತ್ತು ಐಟಿ ಸಂಸ್ಥೆಗಳು ಸೇರಿದಂತೆ ಎಲ್ಲ ವಲಯದ ಉದ್ಯೋಗಸ್ಥ ಮಹಿಳೆಯರಿಗೂ ಅನ್ವಯವಾಗುತ್ತದೆ. ವಾರ್ಷಿಕವಾಗಿ ಒಟ್ಟು 12 ದಿನಗಳು ರಜೆ ಸಿಗುವಂತೆ ಮಾಡಿರುವುದು ನಿಜಕ್ಕೂ ಅಭಿನಂದನೀಯ ಕ್ರಮ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲಾ ಬಣ್ಣಿಸಿದ್ದಾರೆ.

*ದೇಶಕ್ಕೆ ಮಾದರಿ, ಮಾನವೀಯತೆಯ ದ್ಯೋತಕ:*
ಕರ್ನಾಟಕ ಸರ್ಕಾರದ ಈ ಋತುಚಕ್ರ ರಜೆ ನೀತಿ 2025 ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ, "ನಮ್ಮ ಕಾಂಗ್ರೆಸ್ ಪಕ್ಷವು ಹುಟ್ಟಿನಿಂದಲೂ ಮಹಿಳೆಯರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದೆ. ಜೊತೆಗೆ ಅವರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇಂತಹ ಮಾನವೀಯ ಮತ್ತು ಪ್ರಗತಿಪರ ಕ್ರಮವನ್ನು ಕೈಗೊಳ್ಳಲು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಸಾಧ್ಯ. ಈ ನಿರ್ಧಾರದಿಂದಾಗಿ ಕರ್ನಾಟಕವು ಗ್ಯಾರಂಟಿ ಯೋಜನೆಗಳ ನಂತರ ಮತ್ತೊಮ್ಮೆ ಇಡೀ ದೇಶಕ್ಕೆ ಮತ್ತು ಇತರ ರಾಜ್ಯಗಳಿಗೆ ಮಾದರಿಯಾಗಿದೆ" ಎಂದು ಪ್ರಶಂಸಿಸಿದ್ದಾರೆ.

"ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ಐತಿಹಾಸಿಕ ನಿರ್ಧಾರಕ್ಕಾಗಿ ಸಚಿವ ಸಂಪುಟವನ್ನ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಇದು ಕೇವಲ ರಜೆಯಲ್ಲ, ಮಹಿಳೆಯರ ಆರೋಗ್ಯದ ಹಕ್ಕು ಮತ್ತು ಘನತೆಯನ್ನು ಎತ್ತಿಹಿಡಿಯುವ ಕ್ರಮ" ಎಂದು ರಣದೀಪ್‌ಸಿಂಗ್‌ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಕರ್ನಾಟಕ ಸರ್ಕಾರವು ಈ ನೀತಿಯನ್ನು ಜಾರಿಗೊಳಿಸುವ ಮೂಲಕ, ಈ ಸವಲತ್ತನ್ನು ಸಮಗ್ರವಾಗಿ ಮತ್ತು ಕಡ್ಡಾಯವಾಗಿ ಸಾರ್ವಜನಿಕ ಹಾಗೂ ಖಾಸಗಿ ವಲಯಕ್ಕೆ ವಿಸ್ತರಿಸಿದ ದೇಶದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ನಿರ್ಧಾರವು ಮಹಿಳಾ ಕಾರ್ಮಿಕರ ಆರೋಗ್ಯ ಮತ್ತು ಕಲ್ಯಾಣದ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದೂ ಅವರು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ