LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ ಕ್ಯೂಬಿಷನ್ ಯೋಜನೆ: ನ. 21 ರಂದು ಗಂಗಾವತಿಯಲ್ಲಿ ಒಂದು ದಿನದ ಅರಿವು ಕಾರ್ಯಗಾರ


----

ಕೊಪ್ಪಳ ನವೆಂಬರ್20: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಕೆ.ಎಸ್.ಎಮ್.ಸಿ & ಎ. ಬೆಂಗಳೂರು, ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಗಂಗಾವತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಉದ್ದೇಶದಿಂದ (RAMP) ಯೋಜನೆಯಡಿಯಲ್ಲಿ ಇನ್ ಕ್ಯೂಬಿಷನ್ (INCUBATION) ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ನ. 21 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೊಜಿಸಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕಾರ್ಯಾಗಾರ ಉದ್ಘಾಟಿಸುವರು. ಗೌರವಾನ್ವಿತ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಉಪಸ್ಥಿತರಿರುವರು. ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಮನ್ಸೂರ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗಂಗಾವತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಚನ್ನಬಸವಗೌಡ, ಗಂಗಾವತಿ ರೈಸ್ ಮಿಲ್ ಅಸೋಸಿಯೇಷನ್‌ನ ಕಾರ್ಯದರ್ಶಿ ಸಿದ್ದಣ್ಣ ಮಲ್ಲಿಕಾರ್ಜುನ ಮಸ್ಕಿ ಅವರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ಸಿದ್ದಯ್ಯ ಹಾಗೂ ಪ್ರಕಾಶ ಬಿಸೇರೊಟ್ಟಿ ಅವರು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು