LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

ಮುಂಬೈ: ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕಾಂಗ್ರೆಸ್ ಜೊತೆಗೆ ಶಿವಸೇನೆಯನ್ನಯ (ಯುಬಿಟಿ) ಕೂಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಒಂದೆಡೆ ಪ್ರಧಾನಿ ಮೋದಿ ನಿಮ್ಮನ್ನು ಸಮಾಧಿ ಮಾಡುತ್ತಾರೆ ಎಂದು ಹೇಳಿಕೆ ನೀಡುತ್ತಾರೆ.

ಇನ್ನೊಂದೆಡೆ ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದೆ. ಮೋದಿಯನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ. ಅವರ ರಾಜಕೀಯ ದುರುದ್ದೇಶ ಎಷ್ಟು ಕೆಟ್ಟದಾಗಿದೆ. ದೇಶದ ತಾಯಂದಿರು ಮತ್ತು ಸಹೋದರಿಯರ ಶ್ರೀರಕ್ಷೆ ನನ್ನ ಮೇಲೆ ಇರುವವರಿಗೂ ಯಾರೂ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ನಕಲಿ ಶಿವಸೇನೆ ಸದಸ್ಯರು ತಮ್ಮೊಂದಿಗೆ ಬಾಂಬ್ ಸ್ಫೋಟದ ಅಪರಾಧಿಗಳನ್ನು ಪ್ರಚಾರಕ್ಕೆ ಕರೆದೊಯ್ಯಲು ಪ್ರಾರಂಭಿಸಿದ್ದಾರೆ. ಮೇವು ಹಗರಣದ ಆರೋಪಿಯೊಬ್ಬನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಬಿಹಾರ ಸುತ್ತಾಡುತ್ತಿದ್ದಾರೆ. ಬಾಳಾಸಾಹೇಬ್ ಠಾಕ್ರೆ ಅವರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಟುಕಿದರು. ನಾನು ಕಾಂಗ್ರೆಸ್ ರಾಜಮನೆತನದಂತಹ ದೊಡ್ಡ ಕುಟುಂಬದಿಂದ ಬಂದವನಲ್ಲ, ಆದರೆ ನಾನು ಬಡತನದಲ್ಲಿ ಬೆಳೆದಿದ್ದೇನೆ.

ಎಷ್ಟು ಕಷ್ಟಗಳು ಬಂದಿವೆ ಎಂಬುದು ನನಗೆ ಗೊತ್ತು. ನಿಮ್ಮ ಜೀವನದಲ್ಲೂ ಕಷ್ಟಗಳ ಪರ್ವತಗಳಿವೆ. ಅನೇಕ ಬುಡಕಟ್ಟು ಕುಟುಂಬಗಳಿಗೆ ಶಾಶ್ವತ ಮನೆಗಳಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 60 ವರ್ಷ ಕಳೆದರೂ ಇನ್ನೂ ಕೆಲವು ಹಳ್ಳಿಗಳಿಗೆ ವಿದ್ಯುತ್‌ ಸಿಕ್ಕಿಲ್ಲ. ಅವರೆಲ್ಲರಿಗೂ ನಾನು ಸೇವೆ ಸಲ್ಲಿಸಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ವಕೀಲರ ಸಂಘ : “ರಾಜವೀರ ಮದಕರಿನಾಯಕ"ಕ್ಕೆ ಭರ್ಜರಿ‌ ತಾಲೀಮುವಚನ:    -ತುರುಗಾಹಿ ರಾಮಣ್ಣ .!ಮಂಗಳೂರು: ಮಾಜಿ ಶಾಸಕ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್..!ವಿದ್ಯಾರ್ಥಿ ಸಾವಿನ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇನ್ಮುಂದೆ ಆನ್‌ಲೈನ್‌ನಲ್ಲೇ ಇ-ಖಾತೆ ಲಭ್ಯಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಸೇರಿ ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆSBI BANK JOB: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ..!ಇಸ್ರೋದಲ್ಲಿ ಉದ್ಯೋಗಾವಕಾಶ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಗಮನಿಲೇಬೇಕಾದ ಮಹತ್ವದ ಮಾಹಿತಿ ಇಲ್ಲಿದೆಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮನೆ - ಒಂದೇ ಕುಟುಂಬದ 7 ಮಂದಿ ಸಾವು