LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಷ್ಟು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ.! ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

 

ಬೆಂಗಳೂರು ಗ್ರಾ: ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂಗಳಿಂದ 4000 ರೂಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.

ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 3350 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ  ಗಂಟೆಗೆ 2700 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿ