LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈವೊಂದು ವಿಷಯಕ್ಕೆ ಕೋರ್ಟ್ ಮೆಟ್ಟಿಲೇರಿದ ರಾಧಿಕಾ ಪಂಡಿತ್,ಯಶ್..!

ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರು ಜೋರಾಗಿ ವಾದ ಮಾಡಿದ್ದಾರೆ. ಹಾಗಾದರೆ, ಅವರಿಬ್ಬರ ತಕರಾರು ಏನು ಎಂಬ ಪ್ರಶ್ನೆ ಮೂಡುವುದು ಸಹಜ.

ನಟ ಯಶ್ ಅವರು ಸಿನಿಮಾದಲ್ಲಿ ಮಾತ್ರವಲ್ಲದೇ ಜಾಹೀರಾತುಗಳಿಂದಲೂ ಸಾಕಷ್ಟು ಸಂಭಾವನೆ ಪಡೆಯುತ್ತಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಅಡುಗೆ ಎಣ್ಣೆಯ ಕಂಪನಿಯೊಂದಕ್ಕೆ ರಾಧಿಕಾ ಪಂಡಿತ್ ಮತ್ತು ಯಶ್ ಅವರು ಜೋಡಿಯಾಗಿ ಬ್ರ್ಯಾಂಡ್ ಅಂಬಾಸಡರ್ ಆಗಿದ್ದಾರೆ. ಆ ಕಾರಣದಿಂದ ಅವರು ಒಟ್ಟಿಗೆ ಜಾಹೀರಾತಿನಲ್ಲಿ ನಟಿಸಿದ್ದಾರೆ. ಕೋರ್ಟ್ ಥೀಮ್ನಲ್ಲಿ ಈ ಹೊಸ ಜಾಹೀರಾತು ಮೂಡಿಬಂದಿದೆ. ಇದನ್ನು ನೋಡಿ ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಯಶ್ ಮತ್ತು ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್ ಅವರು ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್ ಬಿರುಸಿನಿಂದ ವಾದ ಮಾಡಿದ್ದಾರೆ. ಈ ರೀತಿಯ ದೃಶ್ಯ ಜಾಹೀರಾತಿನಲ್ಲಿ ಇದೆ.ರಾಧಿಕಾ ಪಂಡಿತ್ ಅವರು ಕನ್ನಡ ಚಿತ್ರರಂಗದ ಸ್ಟಾರ್ ನಟಿ. ಆದರೆ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸುವುದು ಕಡಿಮೆ ಆಯಿತು. ಇತ್ತೀಚಿನ ವರ್ಷಗಳಲ್ಲಿ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರ ನಟನೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾದಿಂದ ದೂರ ಉಳಿದಿದ್ದರೂ ಕೂಡ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಅವರು ಸಂಪರ್ಕದಲ್ಲಿ ಇದ್ದಾರೆ.

ಸದ್ಯಕ್ಕೆ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಅಲ್ಲದೇ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಉತ್ಪನ್ನಗಳಿಗೂ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಇಂಥ ಜಾಹೀರಾತುಗಳ ಮೂಲಕವೂ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಅಂದಹಾಗೆ, ಈ ಕೋರ್ಟ್ ಕೇಸ್ ನಿಜ ಜೀವನಕ್ಕೆ ಸಂಬಂಧಿಸಿದ್ದಲ್ಲ. ಇದು ಅವರಿಬ್ಬರೂ ಜೊತೆಯಾಗಿ ನಟಿಸಿರುವ ಜಾಹೀರಾತಿನ ದೃಶ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!