LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಉಪ ಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ ಎಂದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಬೃಹತ್ ಬಹಿರಂಗ ಸಮಾವೇಶದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ದೀರ್ಘದಂಡ ನಮಸ್ಕರಿಸಿ ಭಾಷಣ ಮಾಡಿದ ನಿಖಿಲ್ ಕುಮಾರಸ್ವಾಮಿ, ಈ ಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ.ಯಾವ ಪಾತ್ರ ಮಾಡ್ತೀಯಾ ಅಂತ ಜನ ಕೇಳ್ತಾರೆ. ನನಗೆ ಜಾತಿ ಮುಖ್ಯ ಅಲ್ಲ.ನನಗೆ ಗೊತ್ತಿರೋದು ಮನುಷ್ಯತ್ವ ಒಂದೇ ಅಂತ ತಿಳಿಸಿದರು.

ನಾನು ನಿಮ್ಮಲ್ಲಿ ಪ್ರಾರ್ಥನೆ ಮಾಡುತ್ತೇನೆ,ಇದು ಪ್ರಾದೇಶಿಕ ಪಕ್ಷದ ಪ್ರಶ್ನೆ. ಇದು ಎನ್ ಡಿಎ ಕುಟುಂಬದ ಗೌರವದ ಪ್ರಶ್ನೆ.ಭೂಮಿಗೆ ಬಂದ ಮೇಲೆ ಯೋಗ್ಯತೆ ಸಂಪಾದನೆ ಮಾತ್ರ ಮುಖ್ಯ.ಒಂದು ಅವಕಾಶ ಮಾಡಿಕೊಡಿ.ನಿಮ್ಮ ಸೇವೆ ಮಾಡುವುದಕ್ಕೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಮಾವೇಶದಲ್ಲಿ ಮನವಿ ಮಾಡಿದರು. ಕ್ಷೇತ್ರ ತೆರವಾದ ನಂತರ ಬದಲಾವಣೆ ಬಹಳ ಆಗಿವೆ.ನನ್ನ ಪಾಲಿಗೆ ಈ ಚುನಾವಣೆ ನಿರ್ಣಯಕ.ಎರಡು ಸೋಲಿಗೆ ಎದೆಗುಂದಿಲ್ಲ, ಜನಾಭಿಪ್ರಾಯ ನನ್ನ ಮೇಲೆ ಇತ್ತು.

ಕಾಂಗ್ರೆಸ್ ಕುತಂತ್ರದಿಂದ ನಾನು ಸೋತೀರಬಹುದು ಆದರೆ ಫಲಿತಾಂಶ ಬೇರೆ ಆಯ್ತು..ನನ್ನ ಸೋಲಿಗೆ ಕಾರಣ ಚರ್ಚೆ ಬೇಡ ಎಂದು ತಿಳಿಸಿದರು. ಕಾರ್ಯಕರ್ತರ ಬಯಕೆಯಂತೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದೇನೆ. ಯಾವ ಕಾರಣಕ್ಕೂ ಕ್ಷೇತ್ರದ ಜನ ಕೂಪನ್ ಗೆ ಬೆಲೆ ನೀಡಲ್ಲ. ಆಮಿಷಗಳಿಗೆ ಬಲಿಯಾಗಲ್ಲ ನಮ್ಮ ಚನ್ನಪಟ್ಟಣ ಜನ ಎಂದರು. ನಾಮಪತ್ರ ಸಲ್ಲಿಸಿ ಪ್ರಚಾರ ಆರಂಭ ಮಾಡಿದಾಗ ಭಾವನಾತ್ಮಕವಾಗಿ ಮಾತಾಡಿದೆ.ನಾನು ಭಾವನೆ ಇರುವ ವ್ಯಕ್ತಿ. ಕಳೆದ 16 ದಿನಗಳಲ್ಲಿ ಬಹಳ ಆಶೀರ್ವಾದ ಪಡೆದಿದ್ದೇನೆ. ನನಗೆ ಆಶೀರ್ವಾದ ಮಾಡಿ ಒಂದು ಪರೀಕ್ಷೆಮಾಡಿ ಈ ಪರೀಕ್ಷೆಯಲ್ಲಿ ನಾನು ಗೆದ್ದರೆ ನೀವೇ ಪರೀಕ್ಷಿಸಿ ಎಂದು ಮನವಿ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ