ಈ ಎರಡು ದಿನ ನಗರೆಕ್ಕೆ ವಾಣಿವಿಲಾಸ ಸಾಗರ ಕುಡಿಯುವ ನೀರು ತಾತ್ಕಾಲಿಕ ಸ್ಥಗಿತ.!
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಸಿ.ಐ ಮತ್ತು ಎಂ.ಎಸ್ ಪೈಪ್‍ಲೈನ್‍ಗಳ ಮರು ಜೋಡಣೆ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಡಿಸೆಂಬರ್ 30 ಮತ್ತು 31 ರಂದು ಸ್ಥಗಿತಗೊಳಿಸಲಾಗುತ್ತದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ.
ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.