ಈ ದಿನಾಂಕದಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ.!
ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ನ.16 ರಿಂದ 19 ರವರೆಗೆ ಸ್ಥಗಿತಗೊಳಿಸಲಾಗುತ್ತಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.