ಈ ಪ್ರಕರಣಕ್ಕೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು.!
ಮೈಸೂರು: ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ
“ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ನಜ್ಮಾ ದೂರು ನೀಡಿದ್ದು, ದೂರು ನೀಡಿರುವ ಹಿನ್ನೆಲೆಯಲ್ಲಿ ಈ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯ ಪೊಲೀಸರು IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.