LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ವರ್ಷದಿಂದ 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ..!

ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024–25ನೇ ಶೈಕ್ಷಣಿಕ ಸಾಲಿನಿಂದ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ–1 ಮತ್ತು ಭಾಗ–2ರ ಆಧಾರದಲ್ಲಿ ಮೌಲ್ಯಾಂಕನ ಪೂರ್ಣಗೊಳಿಸಲು ಎಲ್ಲ ಶಾಲೆಗಳಿಗೂ ಸುತ್ತೋಲೆ ಕಳುಹಿಸಲಾಗುತ್ತಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್‌ ಸಿಂಗ್ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಇಲ್ಲಿದೆ ಟಿಪ್ಸ್ .! 31 ದಿನಕ್ಕೆ ಒಂದು ಒಂದೊಂದು ರೀತಿಯ ಪಲ್ಯದ ವಿವರ.!ಅಡಮಾನ ಇಟ್ಟ ಆಭರಣ ಮರಳಿ ಪಡೆಯಲು, ಈ ಪರಿಹಾರ ಮಾಡಿ..!ವಚನ.: - ಅವಸರದ ರೇಕಣ್ಣ .!ಭಾರತ-ಪಾಕ್ ಯುದ್ಧದಲ್ಲಿ ಅಮೆರಿಕದ ಮಧ್ಯಪ್ರವೇಶ ಏಕೆ? ಕದನ ವಿರಾಮದಿಂದ ಭಯೋತ್ಪಾದನೆ ದಾಳಿ ನಿಲ್ಲಬಹುದ?ಕದನ ವಿರಾಮಕ್ಕೆ ಸಹಿ ಭಾರತ-ಪಾಕ್‌ ಒಪ್ಪಿಗೆ-ಸರ್ಕಾರದಿಂದ ಅಧಿಕೃತ ಘೋಷಣೆಕದನ ವಿರಾಮಕ್ಕೆ ಒಪ್ಪಿದ ಭಾರತ- ಪಾಕ್: ಟ್ರಂಪ್ ಘೋಷಣೆಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವೀರಸೈನಿಕರಿಗೆ ಆತ್ಮಸ್ಥೈರ್ಯ ಸಿಗಲಿ ಎಂದು ಮೃತ್ಯುಂಜಯ ಹೋಮ.!ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದಭವಿಷ್ಯದಲ್ಲಿನ ಭಯೋತ್ಪಾದಕ ಕೃತ್ಯವನ್ನು ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ - ಭಾರತ ಎಚ್ಚರಿಕೆಭಾರತೀಯ ಮಹಿಳಾ ಪೈಲಟ್ ಪಾಕ್‌ನಲ್ಲಿ ಸೆರೆ- ಇಲ್ಲಿದೆ ವೈರಲ್‌ ಸುದ್ದಿಯ ಅಸಲಿಯತ್ತು