LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿ(Free tailoring training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ತರಬೇತಿ ನಡೆಯುವ ಕೇಂದ್ರದ ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ವಿವರಿಸಿರುವ ಸಂಫೂರ್ಣ ಮಾಹಿತಿಯನ್ನು ತಿಳಿದುಕೊಂಡು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.


Free tailoring training- ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

1) ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

2) ಕನ್ನಡ ಬಾಷೆಯನು ಓದಲು ಮತ್ತು ಬರೆಯಲು ಬರಬೇಕು.

3) ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

4) ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಈ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:

ಈ ತರಬೇತಿಯು ಒಟ್ಟು 30 ದಿನ ಆಯೋಜನೆ ಮಾಡಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಲಾಗಿದೆ.


Bank loan for tailoring business- ಬ್ಯಾಂಕ್ ಮೂಲಕ ಸಾಲ ಸೌಲಭ್ಯ:

ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 30 ದಿನದ ತರಬೇತಿಯಲ್ಲಿ ಉಚಿತವಾಗಿ ಹೋಲಿಗೆ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ಪಡೆಯಬಹುದು ಎಂದು ಸಹ ಮಾಹಿತಿ ನೀಡುವುದರ ಜೊತೆಗೆ ಸಾಲ ಪಡೆಯಲು ದಾಖಲಾತಿಗಳನ್ನು ಹೇಗೆ ಸಿದ್ದಪಡಿಸಬೇಕು? ಯಾವ ರೀತಿ ಸಾಲಕ್ಕೆ ಅರ್ಜಿ ಸಲ್ಲಿಸಬೇಕು ಎನ್ನುವ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.

Training Application-ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ:

ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಸಬಹುದು.


Required documents for application- ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.

ಬ್ಯಾಂಕ್ ಪಾಸ್ ಬುಕ್.

ರೇಶನ್ ಕಾರ್ಡ.

ಮೊಬೈಲ್ ಸಂಖ್ಯೆ.

Training date- ತರಬೇತಿ ನಡೆಯುವ ಅವಧಿ:

30 ದಿನದ ಉಚಿತ ಹೋಲಿಗೆ ತರಬೇತಿ ದಿನಾಂಕ: 12 ಆಗಸ್ಟ್ 2024 ರಿಂದ ಪ್ರಾರಂಭವಾಗಿ 10 ಸೆಪ್ಟೆಂಬರ್ 2024ಕ್ಕೆ ಮುಕ್ತಾಯವಾಗಲಿದೆ.

Training Center Address- ತರಬೇತಿ ನಡೆಯುವ ಸ್ಥಳ:

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343

ಇನ್ನು ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ