LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ: ಮಗಳ ಖಾಸಗಿ ವಿಡಿಯೋ ವೈರಲ್ ಮಾಡಿದ ತಂದೆ..! ತಾಯಿ ದೂರು

ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಪದ್ಬಾಂಧವ ಆಸಿಫ್‌ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್‌ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್‌ ಗ್ರೋಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್‌ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್‌ಗೆ ಇಷ್ಟವಿರಲಿಲ್ಲ.ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್‌ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್‌ ಗ್ರೂಪ್‌ಗಳು ಸೇರಿ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎರಡು ರೈಲಿನ ನಡುವೆ ಭೀಕರ ಅಪಘಾತ: 6 ಸಾವು, ಹಲವರಿಗೆ ಗಾಯಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದು