LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ: ಮಹಿಳೆಯನ್ನು ಚುಡಾಯಿಸಿದ ಪ್ರಕರಣ, ವಿಚಾರಣೆಗಾಗಿ ಠಾಣೆಗೆ ಬಂದಿದ್ದ ಆರೋಪಿ ಲಾಕಪ್ ಡೆತ್..!

ಉಡುಪಿ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಇಂದು ಸೆಲ್‌ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಕೇರಳ ರಾಜ್ಯ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಮೋಹನ್, ನವೆಂಬರ್ 9 ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಿದ್ದ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬಿಜು ಮೋಹನ್‌ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದರೆನ್ನಲಾದ ಬಿಜು ಮೋಹನ್ ರನ್ನು ಸೆಲ್‌ನಲ್ಲಿ ಇರಿಸಲಾಗಿದ್ದು, ಇಂದು ನಸುಕಿನ ವೇಳೆ 3:30ರ ಸುಮಾರಿಗೆ ಆತ ಸಮೀಪದ ಬಾತ್ ರೂಮಿನಲ್ಲಿ ಕುಸಿದುಬಿದ್ದಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!